

ಗೋಕಾಕ: ಭಾರತದ ಮಾಜಿ ಪ್ರಧಾನಮಂತ್ರಿ, ಬಿಜೆಪಿ ನೇತಾರ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಉತ್ತಮ ಆಡಳಿತ ದಿನವಾಗಿ ಆಚರಿಸುತ್ತ ಬಂದಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ನಗರದ ಗಹಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಳದಿಂದ ಬುಧವಾರ ಹಮ್ಮಿಕೊಂಡಿದ್ದ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಭ್ಯತೆ, ಹಾಸ್ಯಪ್ರಜ್ಞೆ, ಉದಾರ ವ್ಯಕ್ತಿತ್ವ ಮತ್ತು ನಡವಳಿಕೆಗಳಿಂದ ವಾಜಪೇಯಿ ಅವರು ಅತ್ಯಂತ ಜನಪ್ರಿಯ ನಾಯಕರಾಗಿದ್ದರು. ಬಿಜೆಪಿಯಿಂದ ಮೊದಲ ಪ್ರಧಾನಿಯಾಗಿದ್ದರು. ದೇಶದ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಅಪಾರವಾಗಿದೆ ಎಂದು ಸ್ಮರಿಸಿದರು.
ಬಿಜೆಪಿ ನಗರ ಮಂಡಲಾಧ್ಯ ಭೀಮಶಿ ಭರಮನ್ನವರ, ನಗರಸಭೆ ಅಧ್ಯ ಪ್ರಕಾಶ ಮುರಾರಿ, ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಲಕ್ಷ$್ಮಣ ತಪಸಿ, ಮಾಜಿ ಜಿಪಂ ಸದಸ್ಯರಾದ ಟಿ.ಆರ್. ಕಾಗಲ, ಎಂ.ಎಲ್. ತೋಳಿನವರ, ನಗರಸಭೆ ಸದಸ್ಯರಾದ ಕುತ್ಬುದ್ದೀನ್ ಗೋಕಾಕ, ಅಬ್ಬಾಸ್ ದೇಸಾಯಿ, ಬಸವರಾಜ ಆರೇನ್ನವರ, ಜಯಾನಂದ ಹುಣಚ್ಯಾಳ, ಮುಖಂಡರಾದ ಪರಶುರಾಮ ಭಗತ, ಅಶೋಕ ಗೋಣಿ, ಅನಿಲ ತುರಾಯಿದಾರ, ಆನಂದ ಉಳ್ಳಾಗಡ್ಡಿ, ಬಸವರಾಜ ಹಿರೇಮಠ ಇತರರಿದ್ದರು.