

ಬೈಲಹೊಂಗಲ: ಪಟ್ಟಣದ ಮಾಜಿ ಶಾಸಕ ಜಗದೀಶ ಮೆಟಗುಡ್ಡ ಗಹ ಕಚೇರಿಯಲ್ಲಿ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಬುಧವಾರ ಆಚರಿಸಲಾಯಿತು.
ಜಗದೀಶ ಮೆಟಗುಡ್ಡ ಮಾತನಾಡಿ, ದೂರದಷ್ಟಿ ಆಡಳಿತದ ಮೂಲಕ ಜನಮನ ಗೆದ್ದ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರು ದೇಶ ಕಂಡ ಅತ್ಯುತ್ತಮ ಪ್ರಧಾನಿ. ಅವರ ಆದರ್ಶಯುತ ಜೀವನ ಮತ್ತು ಸಾಧನೆಗಳು ಸ್ಮರಣಾರ್ಹ. ಪ್ರಧಾನಮಂತ್ರಿ ಮೋದಿಯವರ ನೇತತ್ವದಲ್ಲಿ ಕೆಗೊಂಡ ಅನೇಕ ಅಭಿವದ್ಧಿ ಯೋಜನೆಗಳು ಹಾಗೂ ಸಾಧನೆಗಳು ಅಟಲ್ಜಿ ಅವರ ಕನಸುಗಳ ಸಾಕಾರಕ್ಕೆ ಪೂರಕವಾಗಿವೆ ಎಂದರು.
ಪುರಸಭೆ ಸದಸ್ಯ ಗುರು ಮೆಟಗುಡ್ಡ, ಹಿರಿಯ ಮುಖಂಡ ಗುರುಪಾದ ಕಳ್ಳಿ, ಸುನೀಲ ಮೆಟಗುಡ್ಡ, ಮಂಡಲ ಪ್ರಧಾನ ಕಾರ್ಯದರ್ಶಿ ಲಕ್ಕಪ್ಪ ಕಾರಗಿ, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಹಡಪದ, ಮುಖಂಡರಾದ ಅಜ್ಜಪ್ಪ ಹೊಸೂರ, ರವಿ ಹೊಸೂರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.ಪ್ರಧಾನಿ