

ಕುಂದಾಪುರ: ಭಾರತೀಯ ಜನತಾ ಪಾರ್ಟಿ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಶತ ಜನ್ಮದಿನಾಚರಣೆ ಕಾರ್ಯಕ್ರಮ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆಯಿತು.
ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಕುಂದಾಪುರ ಬಿಜೆಪಿ ಕ್ಷೇತ್ರ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ವಾಜಪೇಯಿ ಅವರ ಪಕ್ಷ ಸಂಘಟನೆ ವೈಖರಿ ಹಾಗೂ ಸಾಧನೆಗಳ ಕುರಿತು ಮಾತನಾಡಿದರು.
ಕುಂದಾಪುರ ಪುರಸಭಾ ಉಪಾಧ್ಯಕ್ಷೆ ವನಿತಾ ಬಿಲ್ಲವ, ಪಕ್ಷದ ಮುಖಂಡರು, ಮಹಿಳಾ ಮೋರ್ಚಾ ಪದಾಧಿಕಾರಿಗಳು, ಪುರಸಭೆ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಂದಾಪುರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ಸ್ವಾಗತಿಸಿದರು. ಸಹ ಪ್ರಭಾರಿ ರಾಜೇಶ್ ಕಾವೇರಿ ಪ್ರಸ್ತಾವನೆಗೈದರು. ಸುಧೀರ್ ಕೆ.ಎಸ್ ವಂದಿಸಿದರು.