ಒಕ್ಕಲಿಗ/ ಇತರೆ ಸಮುದಾಯ ಸಾಲ ಸೌಲಭ್ಯಕ್ಕೆ ಆನ್​ಲೈನ್​ ಮೂಲಕ ಮೂಲಕ ಅರ್ಜಿ ಆಹ್ವಾನ

Vijayavani-logo
Published on

ಗದಗ: ಹಿಂದುಳಿದ ವರ್ಗಗಳಲ್ಲಿ (3ಬಿ) ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ಕಾರ ಒಕ್ಕಲಿಗ, ದಾಸ್​ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ ಒಕ್ಕಲಿಗ, ಹಳ್ಳಿಕಾರ್​, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್​, ನಾಮಧಾರಿ ಗೌಡ, ಉಪ್ಪಿನ ಕೊಳಗ, ಉತ್ತಮ ಕೊಳಗ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗಾಗಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸಾಮೂಹಿಕ ಏತ ನೀರಾವರಿ ಯೋಜನೆ, ಶೈಣಿಕ ಸಾಲ ಯೋಜನೆ, ವಿದೇಶ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಅಜಿರ್ ಆಹ್ವಾನಿಸಲಾಗಿದೆ. ಸೇವಾಸಿಂಧು ಪೋರ್ಟಲ್​ ಮೂಲಕ ಅಜಿರ್ ಸಲ್ಲಿಸಲು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net