

ಸವಣೂರ: ವಾಲ್ಮೀಕಿ ಸಮುದಾಯವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ರಮೇಶ ಕತ್ತಿ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ಸವಣೂರ ಘಟಕ ಹಾಗೂ ಶ್ರೀಮಹರ್ಷಿ ವಾಲ್ಮೀಕಿ ಯುವ ಕ್ಷೇಮಾಭಿವೃದ್ಧಿ ಸಂಘ ವಾಲ್ಮೀಕಿ ಯುವ ಘಟಕ ಸವಣೂರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ರವಿಕುಮಾರ ಕೊರವರ ಅವರಿಗೆ ಮನವಿ ಸಲ್ಲಿಸಲಾಯಿತು.
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಮತದಾನ ನಡೆಯುತ್ತಿರುವ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷ ರಮೇಶ ಕತ್ತಿ ವಾಲ್ಮೀಕಿ ಸಮುದಾಯ ಕುರಿತು ಜಾತಿ ನಿಂದನೆ ಮಾಡಿದ್ದಾರೆ. ಈ ಮೂಲಕ ವಾಲ್ಮೀಕಿ ಸಮುದಾಯವನ್ನು ಅವಮಾನಿಸಿದ್ದಾರೆ. ಸತತ ದಲಿತ ಸಮುದಾಯಗಳ ಭಾವನೆಗಳಿಗೆ ಧಕ್ಕೆ ತರುತ್ತಿರುವ ಇವರ ಮೇಲೆ ಕೂಡಲೇ ಕ್ರಮವಾಗಬೇಕು ಎಂದು ಆಗ್ರಹಿಸಿದರು.
ವಾಲ್ಮೀಕಿ ಮಹಾಸಭಾ ಜಿಲ್ಲಾಧ್ಯಕ್ಷ ರಮೇಶ ಆನವಟ್ಟಿ, ತಾಲೂಕಾಧ್ಯಕ್ಷ ನಾಗಪ್ಪ ತಿಪ್ಪಕ್ಕನವರ, ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಕಾಶ ಡೊಂಬರಮತ್ತೂರ, ತಾಲೂಕು ಯುವ ಘಟಕ ಅಧ್ಯಕ್ಷ ನಾಗರಾಜ ವಾಲ್ಮೀಕಿ, ಪ್ರಧಾನ ಕಾರ್ಯದರ್ಶಿ ನಾಗರಾಜ ಓಲೆಕಾರ, ಪದಾಧಿಕಾರಿಗಳಾದ ಉಡಚಪ್ಪ ಬಡಲಿಂಗಪ್ಪನವರ, ಪ್ರಕಾಶ ಬಾರ್ಕಿ, ಪಾಂಡಪ್ಪ ತಿಪ್ಪಕ್ಕನವರ, ಬಸಪ್ಪ ದೇವಗೇರಿ, ಚನ್ನಪ್ಪ ದೇವಗೇರಿ, ಮಾಂತೇಶ ತಳವಾರ, ಬಸವರಾಜ ಜಲ್ಲಾಪುರ, ಗಿರೀಶ ತಳವಾರ, ಮಂಜಪ್ಪ ಅತ್ತಿಗೇರಿ, ಫಕ್ಕಿರೇಶ ಭರಮನಾಯಕರ, ಪವಿತ್ರ ಮಂಟಗಣಿ ಹಾಗೂ ಇತರರು ಇದ್ದರು.