ರಾಮಾಯಣ ಆದರ್ಶಗಳಿಂದ ಉತ್ತಮ ಜೀವನ

17 HANUR 2
ಮಲೆ ಮಹದೇಶ್ವರ ಬೆಟ್ಟದ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಎ.ಈ ರಘು, ಚಂದ್ರುಶೇಖರ್, ರವೀಂದ್ರ, ಮಹೇಶ್‌ಕುಮಾರ್, ಮಹದೇವಸ್ವಾಮಿ ಇತರರು ಇದ್ದರು
Published on

ಹನೂರು: ರಾಮಾಣ ಮಹಾಕಾವ್ಯದಲ್ಲಿನ ಆದರ್ಶಗಳನ್ನು ಅಳವಡಿಸಿಕೊಳ್ಳುವುದರಿಂದ ಉತ್ತಮ ಜೀವನವನ್ನು ರೂಪಿಸಿಕೊಳ್ಳಬಹುದು ಎಂದು ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ತಿಳಿಸಿದರು.

ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ. ವಿವಿಧ ಜಾತಿ, ಧರ್ಮ, ಭಾಷೆ, ಆಚಾರ-ವಿಚಾರ, ಉಡುಗೆ-ತೊಡುಗೆಗಳನ್ನು ಒಳಗೊಂಡಿದ್ದು, ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಸಹಬಾಳ್ವೆಯೊಂದಿಗೆ ವಾಸಿಸುತ್ತಿದ್ದೇವೆ. ಹಾಗಾಗಿ ಪ್ರಪಂಚದಲ್ಲೇ ಭಾರತ ಬಲಿಷ್ಠ ದೇಶವಾಗಿದೆ. ಇಲ್ಲಿ ಹಲವು ಮಹಾನ್ ನಾಯಕರು ಗ್ರಂಥವನ್ನು ರಚಿಸಿದ್ದು, ದೇಶಕ್ಕೆ ಕೊಡುಗೆ ನೀಡಿದ್ದಾರೆ. ಇದರಲ್ಲಿ ಮಹರ್ಷಿ ವಾಲ್ಮೀಕಿ ಅವರು ರಚಿಸಿರುವ ರಾಮಾಯಣ ಪ್ರಪಂಚದ ಅತ್ಯುನ್ನತ ಮಹಾಕಾವ್ಯಗಳಲ್ಲಿ ಒಂದು. ಇದರಲ್ಲಿ ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ವಿಫುಲವಾದ ಅಂಶಗಳು ಅಡಗಿವೆ. ಇದು ಉತ್ತಮ ಸಮಾಜಕ್ಕೆ ಸ್ಫೂರ್ತಿದಾಯಕವಾಗಿದೆ. ಆದ್ದರಿಂದ ಮಹರ್ಷಿ ವಾಲ್ಮೀಕಿ ಅವರು ಒಂದು ಸಮುದಾಯಕ್ಕೆ ಮಾತ್ರ ಸೀಮಿತವಲ್ಲ. ಹಾಗಾಗಿ ಪ್ರತಿಯೊಬ್ಬರೂ ರಾಮಾಯಣದ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಕೊಳ್ಳಬೇಕು. ಹಾಗೆಯೇ ಈ ಬಗ್ಗೆ ಯುವ ಪೀಳಿಗೆಗೆ ತಿಳಿಸುವಂತಹ ಕೆಲಸವಾಗಬೇಕು ಎಂದು ತಿಳಿಸಿದರು.

ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರುಶೇಖರ್, ನೌಕರರಾದ ರವೀಂದ್ರ, ಮಹೇಶ್‌ಕುಮಾರ್, ಪೊನ್ನಯ್ಯ, ಮಹದೇವಸ್ವಾಮಿ, ಬಿ.ಜೆ ನಾಯಕ್, ಸತೀಶ್, ರಮೇಶ್, ಜನಾರ್ದನ್ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net