

ಪುತ್ತೂರು: ವಾಲ್ಮೀಕಿಯವರ ಕೃತಿಗಳು ಸಮಾಜಕ್ಕೆ ವಿವಿಧ ರೀತಿಯಲ್ಲಿ ಕೊಡುಗೆಗಳನ್ನು ನೀಡಿದ್ದು, ಅವರ ಸಾಮಾಜಿಕ- ಸಾಂಸ್ಕೃತಿಕ ಚಿಂತನೆಗಳು ನಮಗೆ ಉಸಿರಾಗಬೇಕು. ಮಹಾಕಾವ್ಯ ರಾಮಾಯಣ ಬರೆದಿರುವ ವಾಲ್ಮೀಕಿ ಮಹರ್ಷಿ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ವಾಲ್ಮೀಕಿ ಹುಟ್ಟು ಹಾಕಿರುವ ಆದರ್ಶಗಳು ನಮಗೆ ಮಾದರಿಯಾಗಿವೆ ಎಂದು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ತಹಸೀಲ್ದಾರ್ ಪುರಂದರ ಹೇಳಿದರು.
ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಶ್ರೀ ವಾಲ್ಮೀಕಿ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಾಲ್ಮೀಕಿ ಜನಾಂಗದ ಮುಖಂಡ ರಾಜ್ ಬಪ್ಪಳಿಗೆ ಮಾತನಾಡಿದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಣಾಽಕಾರಿ ನವೀನ್ ಭಂಡಾರಿ, ಪೌರಾಯುಕ್ತ ಮಧು ಎಸ್. ಮನೋಹರ್, ತಾಲೂಕು ಆರೋಗ್ಯಾಽಕಾರಿ ಡಾ.ದೀಪಕ್ ರೈ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್, ತಾಲೂಕು ಕಚೇರಿಯ ದಯಾನಂದ್, ಶಿಕ್ಷಣ ಸಂಯೋಜಕ ಹರಿಪ್ರಸಾದ್ ಉಪಸ್ಥಿತರಿದ್ದರು.
ಸಮಾಜಕಲ್ಯಾಣ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಕೃಷ್ಣ ಸ್ವಾಗತಿಸಿದರು. ಹಾರಾಡಿ ಬಾಲಕಿಯರ ವಸತಿ ನಿಲಯದ ಮೇಲ್ವಿಚಾರಕಿ ಪ್ರೇಮಲತಾ ಎಮ್ ಅವರು ವಂದಿಸಿದರು.