ಗುಂಡ್ಲುಪೇಟೆ: ನಾಯಕ ಜನಾಂಗದ ವತಿಯಿಂದ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಶನಿವಾರ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ಅಲಂಕೃತ ವಾಹನದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರ ಇರಿಸಿ ಮಂಗಳವಾದ್ಯಗಳೊಡನೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಜನಾಂಗದ ಮುಖಂಡರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.