ಎಸ್‌ಆರ್‌ಎಸ್ ಪ್ರಜ್ಞಾ ಶಾಲೆಯಲ್ಲಿ ವಾಲ್ಮೀಕಿ ಜಯಂತಿ

ಎಸ್‌ಆರ್‌ಎಸ್ ಪ್ರಜ್ಞಾ ಶಾಲೆಯಲ್ಲಿ ವಾಲ್ಮೀಕಿ ಜಯಂತಿ
Published on

ಹಾಸನ: ನಗರದ ಎಸ್‌ಆರ್‌ಎಸ್ ಪ್ರಜ್ಞಾ ವಿದ್ಯಾಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಇತ್ತೀಚೆಗೆ ಆಚರಿಸಲಾಯಿತು.

ಸಂಸ್ಥೆಯ ಕಾರ್ಯದರ್ಶಿ ಎಂ.ನಟರಾಜ್, ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ವಾಲ್ಮಿಕಿಯವರ ಜೀವನ ಮಾರ್ಗದ ಕುರಿತು ವಿವರಿಸಿದರು.

ಮನುಷ್ಯ ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ವಾಲ್ಮಿಕಿ ಉದಾಹಣೆಯಾಗಿದ್ದಾರೆ. ಮಕ್ಕಳು ವಾಲ್ಮಿಕಿ ಆದರ್ಶ ಪಾಲಿಸಬೇಕೆಂದರು. ಸಂಸ್ಥೆಯ ಟ್ರಸ್ಟಿ ಆಶಾ ನಟರಾಜ್, ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net