ಅ.7ರಂದು ವಾಲ್ಮೀಕಿ ಜಯಂತಿ ಆಚರಣೆ

ಅ.7ರಂದು ವಾಲ್ಮೀಕಿ ಜಯಂತಿ ಆಚರಣೆ
Published on

ಹಾಸನ: ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.7 ರಂದು ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮಂಜುನಾಥ್ ಅವರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ಬೆಳಗ್ಗೆ 11 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ ನಡೆಸಲಾಗುವುದು. ಕಾರ್ಯಕ್ರಮ ಕುರಿತು ಉಪನ್ಯಾಸ ನೀಡಲು ಸಮಾಜ ಚಿಂತಕರಾದ ಅರಕಲಗೂಡಿನ ನಾಗೇಂದ್ರ ಅವರನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು.

ಮೆರವಣಿಗೆಯಲ್ಲಿ ಕಲಾತಂಡಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಕೋರಿದರು. ಕಡ್ಡಾಯವಾಗಿ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಸಮುದಾಯದವರನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ದೂದ್ ಫಿರ್, ವಿವಿಧ ಸಮಾಜದ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net