ವಾಲ್ಮೀಕಿ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ

08 Arakera Photo 01 (1)
Published on

ಅರಕೇರಾ: ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಪಟ್ಟಣದ ಭಾಗ್ಯವಂತಿ ದೇವಸ್ಥಾನದಲ್ಲಿ ವಾಲ್ಮೀಕಿ ಸಮುದಾಯದ ಪೂರ್ವಭಾವಿ ಸಭೆ ಮಂಗಳವಾರ ನಡೆಯಿತು. ಅ.17 ರಂದು ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು.

ಪಟ್ಟಣದ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ವಿದ್ಯುತ್ ದೀಪಾಂಲಕಾರ, ಕೇಸರಿ ಧ್ವಜಗಳ ಅಳವಡಿಕೆ, ಶ್ರೀ ಸೂಗೂರೇಶ್ವರ ದೇವಸ್ಥಾನದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರವನ್ನು ಸಿಂಗರಿಸಿದ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲು ತೀರ್ಮಾನಿಸಲಾಯಿತು. ಮಹರ್ಷಿ ವಾಲ್ಮೀಕಿ ತತ್ವಾದರ್ಶಗಳನ್ನು ಪಾಲಿಸುವ ನಿಟ್ಟಿನಲ್ಲಿ ಎಲ್ಲ ಸಮುದಾಯದವರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ತಾಲೂಕು ಆಡಳಿತದಿಂದ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಪ್ರಮುಖರು ಸಲಹೆ ನೀಡಿದರು.

ಪ್ರಮುಖರಾದ ಶೇಖರಪ್ಪ ಗೌಡ ಮಾಲಿ ಪಾಟೀಲ್, ಹನ್ಮಂತ್ರಾಯ ಪೂಜಾರಿ, ನಾಗರಾಜ ಕರ್ನಾಳ, ರವಿ ನಾಯಕ, ಮಾನಶಯ್ಯ ಪೂಜಾರಿ, ಭೀಮಣ್ಣ ನಾಯಕ, ಬಾಲಯ್ಯ ಕೊತ್ವಾಲ್, ಶ್ರೀಕಾಂತ ನಾಯಕ ಜಲ್ಲೆ, ತಿಮ್ಮಯ್ಯ ನಾಯಕ, ಮುದ್ದಣ್ಣ ನಾಯಕ, ರಾಜು ನಾಯಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net