ವಾಲ್ಮೀಕಿ ಜಯಂತಿ ಆಚರಣೆಗೆ ಪೂರ್ವಭಾವಿ ಸಭೆ

07mdk04
Published on

ಕುಶಾಲನಗರ: ಕುಶಾಲನಗರದ ಪೊಲೀಸ್ ಸಭಾಂಗಣದಲ್ಲಿ ತಾಲೂಕು ದಂಡಾಧಿಕಾರಿಗಳು ಆದ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷ ಕಿರಣ್ ಜಿ. ಗೌರಯ್ಯ ನೇತೃತ್ವದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಸೋಮವಾರ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.

ಸಭೆಯಲ್ಲಿ ಮಾತನಾಡಿದ ಕಿರಣ್ ಜಿ. ಗೌರಯ್ಯ, ವಾಲ್ಮೀಕಿ ಜಯಂತಿಯನ್ನು ಕಳೆದ ವರ್ಷಕ್ಕಿಂತ ಈ ವರ್ಷ ವಿಭಿನ್ನವಾಗಿ ಹೆಚ್ಚು ಜನರನ್ನು ಸೇರಿಸಿ ಅದ್ಧೂರಿಯಾಗಿ ಆಚರಿಸಲು ಹಾಗೂ ಸಮಾಜದ ಪ್ರತಿಭಾವಂತ ಮಕ್ಕಳಿಗೆ, ಗಣ್ಯರಿಗೆ ಸನ್ಮಾನ ಮಾಡಲು ನಿರ್ಧರಿಸಲಾಗಿದೆ. ಸಮಾರಂಭದ ಬಗ್ಗೆ ಗ್ರಾಮ ಪಂಚಾಯಿತಿಗಳು, ಪಿಡಿಒಗಳು, ಸ್ತ್ರಿಶಕ್ತಿ ಸಂಘಗಗಳು, ಆಶಾ ಕಾರ್ಯಕರ್ತೆಯರು ಸೇರಿದಂತೆ ಸಾರ್ವಜನಿರಿಗೆ ಮಾಹಿತಿ ಸೂಚಿಸಿದರು. ಪ್ರಥಮ ದರ್ಜೆ ಕಾಲೇಜಿನ ಸಮೀಪ ಇರುವ ವಾಲ್ಮೀಕಿ ಭವನದಲ್ಲಿ ಜಯಂತಿ ಆಚರಣೆ ಸಮಾರಂಭವನ್ನು ಆಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net