ಮೈಸೂರಿನಲ್ಲಿ ಸೆ.17 ರಂದು ವಾಲ್ಮೀಕಿ ಜಯಂತಿ

Valmiki Sri
Published on

ಮೈಸೂರು: ನಗದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ವಿಶ್ವಕರ್ಮ ಜಯಂತ್ಯುತ್ಸವ ಸಮಿತಿ ವತಿಯಿಂದ ಸೆ.17 ರಂದು ವಿಶ್ವಕರ್ಮ ಜಯಂತಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಸಿದ್ದಾಚಾರ್ ಹೇಳಿದರು.

ಸಮಾರಂಭಕ್ಕೂ ಮುನ್ನ ಬೆಳಗ್ಗೆ 8ಕ್ಕೆ ಇರ್ವಿನ್ ರಸ್ತೆಯ ಶ್ರೀ ಕಾಳಿಕಾಂಬ ಕಮಟೇಶ್ವರ ಸ್ವಾಮಿ ದೇವಸ್ಥಾನದಿಂದ ಜಾನಪದ ಕಲಾತಂಡ ಗಳೊಂದಿಗೆ ಕಲಾಮಂದಿರವರೆಗೆ ಅದ್ಧೂರಿಯ ಮೆರವಣಿಗೆ ನಡೆಸಲಾಗುವುದು. ಬಳಿಕ 11.30ಕ್ಕೆ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಚಿಕ್ಕಬಳ್ಳಾಪುರದ ಶ್ರೀ ವಿಶ್ವಕರ್ಮ ಏಕದಂಡಗಿ ಮಠದ ಶ್ರೀ ಸೂರ್ಯನಾರಾಯಣ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ಹಮ್ಮಿಕೊ ಳ್ಳಲಾಗಿದೆ. ಶಾಸಕ ಕೆ. ಹರೀಶ್ ಗೌಡ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಶೆಲ್ವ ಪಿಳೈ ಅಯ್ಯಂಗಾರ್ ಮುಖ್ಯ ಭಾಷಣ ಮಾಡಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಮಿತಿ ಪದಾಧಿಕಾರಿಗಳಾದ ಸೋಮಾಚಾರ್, ನಾರಾಯಣಾಚಾರ್, ಗುರು ವಿಶ್ವಕರ್ಮ, ಸಿದ್ದರಾಜು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net