ಅ.7ರಂದು ನಗರದಲ್ಲಿ ವಾಲ್ಮೀಕಿ ಜಯಂತಿ: ಜಿಲ್ಲಾಡಳಿತದಿಂದ ಆಯೋಜನೆ

Valmiki 2
Published on

ಮಂಡ್ಯ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಅ.7ರಂದು ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 11ಗಂಟೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿರಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದು, ಶಾಸಕ ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀರಂಗಪಟ್ಟಣ ವಿದ್ಯಾಭಾರತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಎಂ.ಆರ್.ಉಮೇಶ್ ಪ್ರಧಾನ ಭಾಷಣ ಮಾಡಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net