

ಕುಶಾಲನಗರ:
ಕುಶಾಲನಗರದ ಪೊಲೀಸ್ ಸಭಾಂಗಣದಲ್ಲಿ ತಾಲೂಕು ದಂಡಾಧಿಕಾರಿಗಳು ಆದ ರಾಷ್ಟ್ರೀಯ ಹಬ್ಬಗಳ ಸಮಿತಿ ಅಧ್ಯಕ್ಷÀ ಕಿರಣ್ ಜಿ. ಗೌರಯ್ಯ ನೇತೃತ್ವದಲ್ಲಿ ಮುಂಬರುವ ವಾಲ್ಮೀಕಿ ಜಯಂತಿ ಆಚರಿಸುವ ಬಗ್ಗೆ ಸೋಮವಾರ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ಕಿರಣ್ ಜಿ. ಗೌರಯ್ಯ, ವಾಲ್ಮೀಕಿ ಜಯಂತಿಯನ್ನು ಕಳೆದ ವರ್ಷಕ್ಕಿಂತ ಈ ವರ್ಷ ವಿಭಿನ್ನವಾಗಿ ಹೆಚ್ಚು ಜನರನ್ನು ಸೇರಿಸಿ ಅದ್ಧೂರಿಯಾಗಿ ಆಚರಿಸಲು ಹಾಗೂ ಸಮಾಜದ ಪ್ರತಿಭಾವಂತ ಮಕ್ಕಳಿಗೆ, ಗಣ್ಯರಿಗೆ ಸನ್ಮಾನ ಮಾಡಲು ನಿರ್ಧರಿಸಲಾಗಿದೆ. ಸಮಾರಂಭದ ಬಗ್ಗೆ ಗ್ರಾಮ ಪಂಚಾಯಿತಿಗಳಿಗೂ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೂ, ಸ್ತ್ರೀಶಕ್ತಿ ಸಂಘಗಳಿಗೂ ಆಶಾ ಕಾರ್ಯಕರ್ತೆಯರಿಗೂ ಹೆಚ್ಚು ಜನರಿಗೆ ತಿಳಿಯಪಡಿಸುವಂತೆ ಸೂಚಿಸಲಾಗಿದೆ. ಪ್ರಥಮ ದರ್ಜೆ ಕಾಲೇಜಿನ ಸಮೀಪ ಇರುವ ವಾಲ್ಮೀಕಿ ಭವನದಲ್ಲಿ ಹಬ್ಬವನ್ನು ಆಚರಿಸಲಗಾವುದು ಎಂದು ತಿಳಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಜನಾಂಗದ ಗಣ್ಯರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು. ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ವರ್ಗ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.