ವಾಲ್ಮೀಕಿ ಜೀವನ ಮೌಲ್ಯ ಎಂದಿಗೂ ಪ್ರಸ್ತುತ

Valmiki Life Value is ever present
ವಿಜಯಪುರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಪ್ರೊ. ಬಿ.ಕೆ. ತುಳಸಿಮಾಲ, ಡಾ. ಹನುಮಂತಯ್ಯ ಪೂಜಾರ, ಡಾ. ನಟರಾಜ ದುರ್ಗಣ್ಣನವರ ಮತ್ತಿತರರಿದ್ದಾರೆ.
Published on

ವಿಜಯಪುರ : ಮಹರ್ಷಿ ವಾಲ್ಮೀಕಿ ಅವರು ಪ್ರತಿಪಾದಿಸಿದ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ ಹೇಳಿದರು.

ನಗರ ಹೊರ ವಲಯದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಮಹರ್ಷಿ ವಾಲ್ಮೀಕಿ ಪೀಠದ ವತಿಯಿಂದ ಗುರುವಾರ ಹಮ್ಮಿಕೊಂಡ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾಲ್ಮೀಕಿ ಅವರ ಜೀವನಾದರ್ಶಗಳನ್ನು ಇಂದಿನ ಪೀಳಿಗೆಗೆ ರಿಚಯಿಸಬೇಕಾದ ಅಗತ್ಯವಿದೆ ಎಂದು ಕರೆ ನೀಡಿದರು.

ಮೌಲ್ಯಮಾಪನ ಕುಲಸಚಿವ ಎಚ್​.ಎಂ. ಚಂದ್ರಶೇಖರ್​, ಸಂಯೋಜಕ ಸಂದೀಪ್​, ಡಾ. ಹನುಮಂತಯ್ಯ ಪೂಜಾರ, ಡಾ. ನಟರಾಜ ದುರ್ಗಣ್ಣನವರ, ಡಾ. ದೀಪಕ ಶಿಂದೆ, ಡಾ. ಪ್ರಕಾಶ ಸಣ್ಣಕ್ಕನವರ, ಡಾ. ರಮೇಶ ಸೋನಕಾಂಬಳೆ, ಡಾ. ಗುಲಾಬ್​ ರಾಠೋಡ, ವಿದ್ಯಾರ್ಥಿನಿಯರು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net