ಜೀವನದ ಮೌಲ್ಯ ತಿಳಿಸಿಕೊಟ್ಟ ವಾಲ್ಮೀಕಿ

7blrp2
ಬೇಲೂರು ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಉದ್ಘಾಟಿಸಿದರು. ಹೆಬ್ಬಾಳು ಹಾಲಪ್ಪ, ಮಧು ನಾಯಕ್, ಲಕ್ಷ್ಮಣ್ ಇತರರು ಇದ್ದರು.
Published on

ಬೇಲೂರು: ರಾಮಾಯಣದಂತಹ ಮಹಾನ್ ಕಾವ್ಯವನ್ನು ರಚಿಸುವ ಮೂಲಕ ಭಾರತದ ಸಂಸ್ಕೃತಿ, ಸಂಬಂಧ ಮತ್ತು ಜೀವನದ ಮೌಲ್ಯಗಳನ್ನು ಜಗತ್ತಿಗೆ ತಿಳಿಸಿ ಕೊಟ್ಟವರು ಮಹರ್ಷಿ ವಾಲ್ಮೀಕಿ. ಅಂತಹವರ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಹೇಳಿದರು.

ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಂಗಳವಾರ ಪಟ್ಟಣದ ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಾಲ್ಮೀಕಿ ಸಮುದಾಯದವರ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ತಂದಿದ್ದು ಅದರ ಸದುಪಯೋಗ ಪಡಿಸಿಕೊಂಡು ದೇಶಕ್ಕೆ ಉತ್ತಮ ಕೊಡುಗೆ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಸಮಾಜದ ಮುಖಂಡರು ಕ್ರಿಯಾಶೀಲವಾಗಿ ಕೆಲಸ ಮಾಡಬೇಕಿದೆ ಎಂದರು.

ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಹೆಬ್ಬಾಳು ಹಾಲಪ್ಪ ಮಾತನಾಡಿ, ರಾಮಾಯಣ ಮಹಾನ್ ಕಾವ್ಯ ರಚಿಸಿದ ಮಹರ್ಷಿ ವಾಲ್ಮೀಕಿ ಅವರನ್ನು ಇಂದಿಗೂ ಪಟ್ಟಭದ್ರರು ಶೋಷಿಸುವುದು ಕಾಣಬಹುದಾಗಿದೆ. ವಾಲ್ಮೀಕಿಯವರು ರಚಿಸಿದ ರಾಮಾಯಣದ ಪಾತ್ರಗಳು ದೇಶದಲ್ಲಿ ದೈವತ್ವದ ಮೇರು ಸ್ಥಾನ ಪಡೆದರೆ, ವಾಲ್ಮೀಕಿ ಸಮುದಾಯ ಮಾತ್ರ ಇಂದಿಗೂ ಸಂಕಷ್ಟದಲ್ಲಿದ್ದು, ಮುಖ್ಯವಾಹಿನಿಗೆ ಬರುತ್ತಿಲ್ಲ. ಸಮುದಾಯದ ಮುಖಂಡರು ಸರ್ಕಾರದ ಸವಲತ್ತುಗಳನ್ನು ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.

ವಾಲ್ಮೀಕಿ ಸಮಾಜದ ತಾಲೂಕು ಅಧ್ಯಕ್ಷ ಮಧು ನಾಯಕ್, ದಸಂಸ(ಅಂಬೇಡ್ಕರ್ ವಾದ)ಮುಖಂಡ ಲಕ್ಷ್ಮಣ್, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶಿವರಾಜ್, ಕಸಾಪ ತಾಲೂಕು ಅಧ್ಯಕ್ಷ ಮಂಜೇಗೌಡ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಲಿಂಗರಾಜು, ವ್ಯವಸ್ಥಾಪಕ ಭೈರೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಉದಯಕುಮಾರ್, ಬಿಆರ್‌ಸಿ ಶಿವಮರಿಯಪ್ಪ, ಮುಖಂಡರಾದ ಲಕ್ಷ್ಮಣ ನಾಯಕ್, ಕುಮಾರ ನಾಯಕ್, ಶಿವಪ್ಪ ನಾಯಕ್ ಇತರರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net