ಮಕ್ಕಳಲ್ಲಿ ಮೌಲ್ಯಾಭಿವೃದ್ಧಿ ಮನೋಭಾವ: ಶ್ರೀನಿವಾಸ್ ಆಶಯ

Mul_Sasi-vitharane
Published on

ವಿಜಯವಾಣಿ ಸುದ್ದಿಜಾಲ ಮೂಲ್ಕಿ

ಪ್ರಕೃತಿಯ ಬಗ್ಗೆ ಕಾಳಜಿ ಹಾಗೂ ಮೌಲ್ಯಾಭಿವೃದ್ಧಿ ಮನೋಭಾವವನ್ನು ಮಕ್ಕಳಲ್ಲಿ ಮೂಡಿಸಲು ಎಂಆರ್‌ಪಿಎಲ್ ಸಂಸ್ಥೆಯು ಫಲವಸ್ತುಗಳ ಗಿಡಗಳನ್ನು ನೀಡುತ್ತಿದೆ ಎಂದು ಎಂಆರ್‌ಪಿಎಲ್ ಜನರಲ್ ಮ್ಯಾನೇಜರ್ ಶ್ರೀನಿವಾಸ್ ಆರ್. ಹೇಳಿದರು.

ಎಂಆರ್‌ಪಿಎಲ್ ಸಂಸ್ಥೆಯ ಎಚ್‌ಸಿಇ ಯೋಜನೆಯಡಿ ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಸಿಗಳನ್ನು ವಿತರಿಸಿ ಮಾತನಾಡಿದರು.
ಸರ್ಕಾರದ ಸುತ್ತೋಲೆಯಂತೆ ಏಕ್ ಪೇಡ್ ಮಾ ಕೇ ನಾಮ್ ಘೋಷವಾಕ್ಯದಡಿ ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂಜಿನಡ್ಕ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅನುದಾನಿತ ಕೆಪಿಎಸ್‌ಕೆ ಸ್ಮಾರಕ ಪ್ರೌಢಶಾಲೆ ಮತ್ತು ಸಾರ್ವಜನಿಕ ರುದ್ರಭೂಮಿಯ ಆವರಣದಲ್ಲಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ನೆಡಲಾಯಿತು. ಸಂಸ್ಥೆಯು ಮುನ್ನೂರಕ್ಕೂ ಹೆಚ್ಚು ಗಿಡಗಳನ್ನು ಉಚಿತವಾಗಿ ವಿತರಿಸಿತು.

ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಮಾತನಾಡಿದರು. ಎಂಆರ್‌ಪಿಎಲ್ ಸಂಸ್ಥೆಯ ಪವಿತ್ರಾ, ಗ್ರಾಪಂ ಉಪಾಧ್ಯಕ್ಷ ಮನೋಹರ ಕೋಟ್ಯಾನ್, ಸದಸ್ಯ ಜಯಕುಮಾರ್ ಮಟ್ಟು, ಅಭಿವೃದ್ಧಿ ಅಧಿಕಾರಿ ಶೈಲಜಾ, ಕಾರ್ಯದರ್ಶಿ ಮಂಜುನಾಥ, ಶಾಲೆಯ ಮುಖ್ಯಶಿಕ್ಷಕ ವೆಂಕಟರಮಣ ಕಾಮತ್, ಅಂಬರೀಷ್ ಲಮಾಣಿ, ಶಾಲೆಯ ಹಿರಿಯ ವಿದ್ಯಾರ್ಥಿಗಳು, ಶಾಲಾ ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net