ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆಗಳಿಗೆ ಚಾಲನೆ

New Project (12)
Published on

ಬೆಳ್ತಂಗಡಿ : ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನದರ್ಶಿನಿ ಮತ್ತು ಜ್ಞಾನವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆಗಳು ಅಮೃತ ಭಾವನ ಸುಳ್ಯ ಇಲ್ಲಿ ಉದ್ಘಾಟನೆಗೊಂಡಿತು.

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕಿ ಸುನಂದ ಉದ್ಘಾಟಿಸಿದರು.

ಶಾಂತಿವನ ಟ್ರಸ್ಟಿನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ.ಶಶಿಕಾಂತ್ ಜೈನ್ ಸ್ಪರ್ಧೆಯ ಉದ್ದೇಶ, ರೂಪುರೇಷೆಯ ಬಗ್ಗೆ ಮಾತನಾಡಿದರು.

ತಾಲೂಕು ಯೋಗ ಸಂಘಟಕಿ ಮಮತಾ ಮೂಡಿತ್ತಾಯ ಸ್ವಾಗತಿಸಿ, ಯೋಗ ಶಿಕ್ಷಕ ವೆಂಕಟರಾಜ ವಂದಿಸಿದರು. ಜಲಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಣ ಸಂಯೋಜಕಿ ಸಂಧ್ಯಾ ಹಾಗೂ ಧನಲಕ್ಷ್ಮೀ ಮತ್ತು ಸಮೂಹ ಸಂಪನ್ಮೂಲ ವ್ಯಕ್ತಿ ಮಮತಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net