ಬಗ್ವಾಡಿ ದೇವಸ್ಥಾನದಲ್ಲಿ ವನಮಹೋತ್ಸವ

gan
Published on

ಕುಂದಾಪುರ: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ನೇತೃತ್ವದಲ್ಲಿ ಅಂಬಲಪಾಡಿ ಉಡುಪಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಸಹಯೋಗದೊಂದಿಗೆ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ವಠಾರದಲ್ಲಿ ವನಮಹೋತ್ಸವ, ಗಿಡ ವಿತರಣಾ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಹೆಮ್ಮಾಡಿ ಘಟಕ ಅಧ್ಯಕ್ಷ ದಿನೇಶ್ ಕಾಂಚನ್ ಬಾಳಿಕೆರೆ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಅಧ್ಯಕ್ಷ ಉದಯ್ ಕುಮಾರ್ ಹಟ್ಟಿಅಂಗಡಿ, ಮಾಜಿ ಅಧ್ಯಕ್ಷ ಎಂ.ಎಂ.ಸುವರ್ಣ, ಘಟಕದ ಗೌರವಾಧ್ಯಕ್ಷ ಲೋಹಿತಾಶ್ವ ಆರ್.ಕುಂದರ್, ಮಾಜಿ ಅಧ್ಯಕ್ಷ ರಾಘವೇಂದ್ರ ನೆಂಪು, ಕಾರ್ಯದರ್ಶಿ ಜಗದೀಶ ನೆಂಪು, ಬಗ್ವಾಡಿ ಸ್ತ್ರೀಶಕ್ತಿ ಅಧ್ಯಕ್ಷೆ ಶ್ಯಾಮಲಾ ಚಂದನ್, ಸದಸ್ಯರು, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಸದಸ್ಯರು, ಯುವ ಸಂಘಟನೆಯ ಹೆಮ್ಮಾಡಿ ಘಟಕ ಸದಸ್ಯರು, ದೇವಸ್ಥಾನ ಸಿಬ್ಬಂದಿ ಉಪಸ್ಥಿತರಿದ್ದರು. ಎಲ್ಲ ಸದಸ್ಯರಿಗೆ, ಉಪಸ್ಥಿತರಿದ್ದವರಿಗೆ ಗಿಡ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net