ಎಲಿಮಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ವನಮಹೋತ್ಸವ

New Project (18)
Published on

ಸುಬ್ರಹ್ಮಣ್ಯ: ಎಸ್‌ಎಸ್‌ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಸುಬ್ರಹ್ಮಣ್ಯ ರೋಟರಿ ಕ್ಲಬ್ ಸಹಕಾರದೊಂದಿಗೆ ಎಲಿಮಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ವನಮಹೋತ್ಸವ ನಡೆಯಿತು.

ಅರಣ್ಯಾಧಿಕಾರಿ ಸೌಮ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾ.ಪಂ. ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಗಿಡ ನೆಟ್ಟರು. ಬಳಿಕ ಶಾಲಾ ಆವರಣದಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳು 75 ಸಸಿಗಳನ್ನು ನೆಟ್ಟರು. ಪ್ರಾಚಾರ್ಯ ಸೋಮಶೇಖರ ನಾಯಕ್, ಎಲಿಮಲೆ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಅಂಬೆಕಲ್ಲು, ಎಸ್‌ಡಿಎಂಸಿ ಅಧ್ಯಕ್ಷ ಪುರುಷೋತ್ತಮ್, ಶಿಕ್ಷಕ ಮುರಳೀಧರ್, ಸುಬ್ರಹ್ಮಣ್ಯ ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ಜಯಪ್ರಕಾಶ್ ಆರ್., ನಿಯೋಜಿತ ಕೋಶಾಧಿಕಾರಿ ದಿನೇಶ್ ಎಣ್ಣೆಮಜಲು, ಎನ್‌ಎಸ್‌ಎಸ್ ಯೋಜನಾಧಿಕಾರಿಗಳಾದ ಸೌವ್ಯಾ ದಿನೇಶ್, ಪೂರ್ಣಿಮಾ ಮೊದಲಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net