

ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಒತ್ತಾಯದ ಮೇರೆಗೆ ರೈಲ್ವೆ ಇಲಾಖೆ ಬೆಂಗಳೂರು-ಬೆಳಗಾವಿ-ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ಮುಂದಾಗಿದೆ.
ಈ ರೈಲು ಸಂಚಾರದಿಂದ ಉತ್ತರ ಕರ್ನಾಟಕದ ಸಂಪರ್ಕ ಮತ್ತು ಅಭಿವೃದ್ಧಿಗೆ ದೊಡ್ಡ ಉತ್ತೇಜನ ದೊರೆಯಲಿದೆ. ಹಾಗಾಗಿ, ವಂದೇ ಭಾರತ್ ರೈಲು ಸಂಚಾರ ಆರಂಭಿಸುವಂತೆ ಒತ್ತಾಯಿಸಿ ಪ್ರಲ್ಹಾದ ಜೋಶಿ ಅವರು ಕಳೆದ ಫೆ. 10ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದರು.
ಇದಕ್ಕೆ ಸ್ಪಂದಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ಏ.28ರಂದು ಸಚಿವ ಜೋಶಿ ಅವರಿಗೆ ಪತ್ರ ಬರೆದು ತಮ್ಮ ಒತ್ತಾಸೆಯಂತೆ ಬೆಂಗಳೂರು-ಬೆಳಗಾವಿಗೆ ವಂದೇ ಭಾರತ್ ರೈಲು ಸಂಚಾರಕ್ಕೆ ಅನುಮೋದನೆ ನೀಡಿದ್ದಾಗಿ ತಿಳಿಸಿದ್ದಾರೆ.