ಜ.2ರಿಂದ ಘಟಪ್ರಭಾದಲ್ಲಿ ವಂದೇ ಭಾರತ್ ರೈಲು ಸೇವೆ

Vande Bharath Express
Published on

ಘಟಪ್ರಭಾ: ಪುಣೆ-ಹುಬ್ಬಳ್ಳಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು 2025ರ ಜನವರಿ 2 ರಿಂದ ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲುಗಡೆ ವೇಳಾಪಟ್ಟಿಯನ್ನು ನೈಋತ್ಯ ರೈಲ್ವೆ ಇಲಾಖೆ ಪ್ರಕಟಿಸಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪುಣೆಯಿಂದ ಮಧ್ಯಾಹ್ನ 2.15 ಕ್ಕೆ ಹೊರಟು ರಾತ್ರಿ 7.38ಕ್ಕೆ ಘಟಪ್ರಭಾ ನಿಲ್ದಾಣಕ್ಕೆ ಆಗಮಿಸಲಿದೆ. ಈ ಸಂದರ್ಭದಲ್ಲಿ ಘಟಪ್ರಭಾ ರೈಲು ನಿಲ್ದಾಣದಲ್ಲಿ ರಾತ್ರಿ 7 ಗಂಟೆಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರೈಲು ಬಳಕೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿದರು.

2025 ಜನವರಿ 3 ರಂದು ಹುಬ್ಬಳ್ಳಿ ನಿಲ್ದಾಣದಿಂದ ಬೆಳಗ್ಗೆ 5.15ಕ್ಕೆ ಹೊರಟು ಬೆಳಗ್ಗೆ 7.23ಕ್ಕೆ ಘಟಪ್ರಭಾ ರೈಲು ನಿಲ್ದಾಣಕ್ಕೆ ಆಗಮಿಸಲಿದೆ. ಈ ರೈಲು ವಾರದಲ್ಲಿ ಮೂರು ಬಾರಿ ಹುಬ್ಬಳ್ಳಿಯಿಂದ (ಬುಧವಾರ, ಶುಕ್ರವಾರ ಹಾಗೂ ಭಾನುವಾರ) ಮತ್ತು ಪುಣೆಯಿಂದ (ಗುರುವಾರ, ಶನಿವಾರ ಮತ್ತು ಸೋಮವಾರ) ಸಂಚರಿಸಲಿದೆ. ಘಟಪ್ರಭಾ ನಿಲ್ದಾಣದಲ್ಲಿ 2 ನಿಮಿಷಗಳ ನಿಲುಗಡೆ ಅವಕಾಶ ಕಲ್ಪಿಸಲಾಗಿದೆೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net