

ರಾಯಚೂರು: ಕಲಬುರಗಿ-ಬೆಂಗಳೂರು ನಡುವಿನ ವಂದೇ ಭಾರತ್ ಾಸ್ಟ್ ಪ್ಯಾಸೆಂಬರ್ ರೈಲು ಸಂಚಾರಕ್ಕೆ ಸ್ಥಳೀಯ ರೈಲು ನಿಲ್ದಾಣದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ ಮಂಗಳವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರಾಜಾ ಅಮರೇಶ್ವರ ನಾಯಕ ಮಾತನಾಡಿ, ವಂದೇ ಭಾರತ್ ರೈಲು ಸಂಚಾರದಿಂದ ರಾಯಚೂರು, ಯಾದಗಿರಿ, ಕಲಬುರಗಿ ಜಿಲ್ಲೆಗಳ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ಒಂದು ನಿಲ್ದಾಣ ಮತ್ತು ಒಂದು ಉತ್ಪನ್ನ ಯೋಜನೆ ಜಾರಿಯಿಂದ ರೈತರಿಗೂ ಅನುಕೂಲವಾಗಲಿದೆ ಎಂದರು.
ನಗರದ ಸುತ್ತಲೂ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಆಗುತ್ತಿದ್ದು, ನಗರದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಬೆಳಗಾವಿ-ರಾಯಚೂರು, ಅಕ್ಕಲಕೋಟೆ-ರಾಯಚೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಆರಂಭವಾಗಿದೆ. ತುಂಗಭದ್ರಾ-ಕಲ್ಮಲಾವರೆಗೆ ನಾಲ್ಕು ಪಥದ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆಯುವುದು ಬಾಕಿಯಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಮುಖ್ಯಸ್ಥೆ ಸ್ಮೀತಾ ಅಕ್ಕ, ನಗರ ಶಾಸಕ ಡಾ.ಶಿವರಾಜ ಪಾಟೀಲ್, ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ಮುಖಂಡರಾದ ಬಾಬುರಾವ್, ರವೀಂದ್ರ ಜಲ್ದಾರ್, ಬಂಡೇಶ ವಲ್ಕಂದಿನ್ನಿ, ನರಸಪ್ಪ ಯಕ್ಲಾಸಪುರ, ವಿಜಯರಾಜೇಶ್ವರಿ, ಸುಲೋಚನಾ ಆಲ್ಕೂರು, ವಾಣಿಶ್ರೀ ಉಪಸ್ಥಿತರಿದ್ದರು.