ವಾಣಿ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ

New Project (7)
Published on

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ತಾಲೂಕುಮಟ್ಟದ ಪದವಿ ಪೂರ್ವ ಕಾಲೇಜುಗಳ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದು, ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿದೆ.

ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.

ವಾಣಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಪಪಂ ಅಧ್ಯಕ್ಷ ಜಯಾನಂದ ಗೌಡ, ವಾಣಿ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ಪದ್ಮ ಗೌಡ ಎಚ್., ಜತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುರೇಂದ್ರ ಉಪಸಿತರಿದ್ದರು. ಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ.ಸ್ವಾಗತಿಸಿದರು. ಉಪನ್ಯಾಸಕ ಶಂಕರ್ ರಾವ್ ವಂದಿಸಿದರು. ಉಪನ್ಯಾಸಕಿ ಶ್ರಾವ್ಯಾ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net