

ಬೆಳ್ತಂಗಡಿ: ಯುವಜನರು ಜೀವನ ಕೌಶಲಗಳನ್ನು ಕಲಿತುಕೊಂಡು ಉತ್ತಮ ಬದುಕನ್ನು ನಡೆಸುವುದರೊಂದಿಗೆ ರಾಷ್ಟ್ರಸೇವೆಯಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದು ಸುಲ್ಕೇರಿ ಶ್ರೀರಾಮ ಶಾಲಾ ಉಪಾಧ್ಯಕ್ಷ ಚಂದ್ರಕಾಂತ ಗೋರೆ ಹೇಳಿದರು.
ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಮಾರೋಪ ಭಾಷಣ ಮಾಡಿದರು.
ವಾಣಿ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಧರ್ನಪ್ಪ ಗೌಡ ಬಾನಡ್ಕ, ಕೋಶಾಧಿಕಾರಿ ಯುವರಾಜ್ ಅನಾರ್, ವಾಣಿ ಸೌಹಾರ್ದ ಬ್ಯಾಂಕ್ ನಿರ್ದೇಶಕ ಪುರಂದರ ಗೌಡ ಮುಗೇರಡ್ಕ, ಸುಲ್ಕೇರಿ ಗ್ರಾಪಂ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ಶುಭಕರ ಪೂಜಾರಿ, ಸದಸ್ಯರಾದ ರವಿ ಪೂಜಾರಿ, ಸುಲ್ಕೇರಿ ಶ್ರೀರಾಮ ಶಾಲಾಡಳಿತ ಮಂಡಳಿ ಅಧ್ಯಕ್ಷ ರಾಜು ಪೂಜಾರಿ, ಮುಖ್ಯ ಶಿಕ್ಷಕ ಪ್ರಮೋದ್, ನಾರಾವಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸದಾನಂದ ಗೌಡ ಮಜ್ಜೋಡಿ, ನಾರಾವಿ ವಲಯ ಎಸ್‌ಕೆಡಿಆರ್‌ಡಿಪಿ ಮೇಲ್ವಿಚಾರಕಿ ವಿಶಾಲಾ ಕೆ. ಮೊದಲಾದವರಿದ್ದರು. ಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ. ಸ್ವಾಗತಿಸಿದರು. ಎನ್ನೆಸ್ಸೆಸ್ ಸಹಕಾರ್ಯಕ್ರಮಾಧಿಕಾರಿ ಶ್ರಾವ್ಯಾ ವರದಿ ವಾಚಿಸಿದರು. ಘಟಕ ನಾಯಕ ತೀರ್ಥೇಶ್ ಹಾಗೂ ನಾಯಕಿ ಸುಶ್ಮಿತಾ ಅನಿಸಿಕೆ ವ್ಯಕ್ತಪಡಿಸಿದರು. ಉಪನ್ಯಾಸಕ ಮಹಾಬಲ ಗೌಡ ನಿರೂಪಿಸಿದರು. ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ದಿನೇಶ್ ಗೌಡ ಯು. ವಂದಿಸಿದರು.