

ಹಾವೇರಿ: ವರದಾ ನದಿಯಲ್ಲಿ ನೀರು ಕುಡಿಯಲು ಹೋದ ವೃದ್ಧರೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ನಾಗನೂರ ಗ್ರಾಮದ ಬಳಿ ಸೋಮವಾರ ನಡೆದಿದೆ.
ಹಾನಗಲ್ಲ ತಾಲೂಕಿನ ಜಕನಾಯಕನಕೊಪ್ಪದ ಕಲ್ಲಪ್ಪ ಶಿವಪ್ಪ ಹುರಳಿಕುಪ್ಪಿ (85) ಮೃತ ವೃದ್ಧರು.
ಇವರು ವರದಾ ನದಿ ದಂಡೆಯಲ್ಲಿ ನೀರು ಕುಡಿಯುತ್ತಿದ್ದಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.