ವರದಾ ನದಿಯಲ್ಲಿ ಈಜಲು ಹೋದ ಯುವಕ ಸಾವು

Crime Logo
Published on

ಸವಣೂರ: ನದಿಯಲ್ಲಿ ಈಜಲು ಹೋದ ಬಾಲಕನೊಬ್ಬ ನೀರಿನಲ್ಲಿ ಮುಳಗಿ ಮೃತಪಟ್ಟ ಘಟನೆ ತಾಲೂಕಿನ ಕಳಸೂರ ಗ್ರಾಮದ ವರದಾ ನದಿಯಲ್ಲಿ ಬುಧವಾರ ನಡೆದಿದೆ.
ಗ್ರಾಮದ ಅಮೋಘ ಸುಧೀರ ಹೊಸಮನಿ (17) ಮೃತ ಬಾಲಕ.
ಈತ ನದಿಯಲ್ಲಿ ಈಜಲು ಹೋದ ಸಮಯದಲ್ಲಿ ನೀರಿನಲ್ಲಿ ಮುಳಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net