ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಲ್ಲಿ ವರಮಹಾಲಕ್ಷ್ಮೀ ಪೂಜೆ

IMG-20240816-WA0558
Published on

ಅರಸೀಕೆರೆ ಗ್ರಾಮಾಂತರ: ಅರಸೀಕೆರೆ ತಾಲೂಕಿನ ಕುರುವಂಕ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಕೋಳಗುಂದದ ಕೇದಿಗೆ ಮಠದ ಶ್ರೀ ಜಯಚಂದ್ರಶೇಖರ ಸ್ವಾಮೀಜಿ ಅವರ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ ನಡೆಯಿತು.


ಶ್ರೀ ಜಯಚಂದ್ರಶೇಖರ ಸ್ವಾಮೀಜಿ ಮಾತನಾಡಿ, ಡಾ.ವೀರೇಂದ್ರ ಹೆಗ್ಗಡೆ ಅವರು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ದೇವಸ್ಥಾನ ಮತ್ತು ಕೆರೆಗಳಿಗೆ ಅನುದಾನ ನೀಡುತ್ತಿದ್ದಾರೆ. ಶುದ್ಧ ನೀರು, ಮಾಸಾಶನ, ಸಂಘಗಳ ಮೂಲಕ ಸದಸ್ಯರಿಗೆ ಆರ್ಥಿಕ ವ್ಯವಹಾರ ಮಾಡಲು ಸಹಕರಿಸಿದ್ದಾರೆ ಎಂದು ಮೆಚ್ಚುಗೆ ನುಡಿಗಳನ್ನಾಡಿದರು.


ನಿವೃತ್ತ ಯೋಧ ಜಗದೀಶ್ ನಾಯಕ, ಶ್ರೀ ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕಿ ಮಮತಾ ಹರೀಶ್ ರಾವ್ ಮಾತನಾಡಿದರು.


ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಶಾ, ಕುರುವಂಕ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋದಾ ಬಾಯಿ, ಬಾಣವರ ಯೋಜನಾ ಕಚೇರಿಯ ಯೋಜನಾಧಿಕಾರಿ ಜಯಂತ್, ಪೂಜಾ ಸಮಿತಿಯ ಗೌರವಾಧ್ಯಕ್ಷೆ ಲತಾ ಸಿದ್ದೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net