

ಹೊಳೆನರಸೀಪುರ: ಪಟ್ಟಣ ಸೇರಿದಂತೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ಸೆ.26ರ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ತನಕ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಹೊಳೆನರಸೀಪುರ ನೋಡಲ್ ಕೇಂದ್ರ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯುವುದರಿಂದ ಹೊಳೆನರಸೀಪುರ ಪಟ್ಟಣ ಸೇರಿದಂತೆ ಅಮಾನಿಕೆರೆ, ಆಲಗೋಡನಹಳ್ಳಿ, ಮಲ್ಲಪ್ಪನಹಳ್ಳಿ, ಪಡುವಲಹಿಪ್ಪೆ, ಗಂಗೂರು, ವಾಟರ್ ಸಪ್ಲೈ, ಮೆಣಗಿನಹಳ್ಳಿ, ಕೆಎಚ್‌ಬಿ ಕಾಲನಿ, ಗಾಳಿಪುರ, ಐಚನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.