ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಇಂದು

Published on

ಕೊಳ್ಳೇಗಾಲ: ತಾಲೂಕಿನ ಕುಂತೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂ.7ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ತ್ರೈಮಾಸಿಕ ನಿರ್ವಹಣೆ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಅಂದು ಕುಂತೂರು ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಚಿಲಕವಾಡಿ, ಟಗರಪುರ, ಕುಂತೂರು, ಮೆಲ್ಲಹಳ್ಳಿ ಮೋಳೆ, ಆಲಹಳ್ಳಿ, ಯಡಮೋಳೆ, ಕುಂತೂರು ಮೋಳೆ, ಹೊಸ ಮಾಲಂಗಿ, ಕಜ್ಜಿಹುಂಡಿ, ಸಿಲ್ಕಲ್‌ಪುರ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದ್ದು ಸಾರ್ವಜನಿಕರು ಸಹಕರಿಸಬೇಕಾಗಿ ಸೆಸ್ಕ್ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net