ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಇಂದು

Published on

ಕೆ.ಆರ್.ಪೇಟೆ: ತಾಲೂಕಿನ ಅಕ್ಕಿಹೆಬ್ಬಾಳು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ದುರಸ್ತಿ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಆ.22ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಎಇಇ ಪುಟ್ಟಸ್ವಾಮಿ ತಿಳಿಸಿದ್ದಾರೆ.

ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು ಸುತ್ತಮುತ್ತಲಿನ ಗ್ರಾಮಗಳ ಗ್ರಾಹಕರು ಸಹಕರಿಸಬೇಕಾಗಿ ಎಇಇ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net