ಗದಗ, ಮುಂಡರಗಿ, ಶಿರಹಟ್ಟಿ ವ್ಯಾಪ್ತಿಯ ಪ್ರದೇಶಗಳಿಗೆ ನೀರು ಪೂರೈಕೆಯಲ್ಲಿ 22ರಂದು ವ್ಯತ್ಯಯ

jalavadagi water pump
Published on

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಜಾಲವಾಡಗಿ ಗ್ರಾಮದಲ್ಲಿರುವ ನೀರು ಶುದ್ಧೀಕರಣ ಘಟಕದಲ್ಲಿ ಪಂಪ್ ನಿರ್ವಹಣೆ ಕೆಲಸ ಕೈಗೊಳ್ಳುವುದರಿಂದ ಜು. 22ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಗದಗ, ಮುಂಡರಗಿ, ಶಿರಹಟ್ಟಿ ತಾಲೂಕು ವ್ಯಾಪ್ತಿಯ 212 ಜನವಸತಿಗಳಿಗೆ ಹಾಗೂ ಮುಂಡರಗಿ ಪಟ್ಟಣಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net