ಮೇನಾಲದಲ್ಲಿ ವಿವಿಧ ವಿನೋದಾವಳಿಗಳು

Sul_Menal
Published on

ಸುಳ್ಯ: ವಿಶ್ವ ಹಿಂದು ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ, ಶ್ರೀ ಕೃಷ್ಣ ಭಜನಾ ಮಂದಿರ ಮೇನಾಲ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಮೇನಾಲ ಭಜನಾ ಮಂದಿರದಲ್ಲಿ ನಡೆಯಿತು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ವಿಶ್ವ ಹಿಂದು ಪರಿಷತ್ ತಾಲೂಕು ಅಧ್ಯಕ್ಷ ಸೋಮಶೇಖರ ಪೈಕ, ಶಾರದಾಂಬಾ ಸೇವಾ ಸಮಿತಿ ಸುಳ್ಯ ಅಧ್ಯಕ್ಷ ನಾರಾಯಣ ಕೇಕಡ್ಕ, ಅಟಲ್‌ಜಿ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಹರೀಶ್ ಕಂಜಿಪಿಲಿ ಉಪಸ್ಥಿತರಿದ್ದರು. ಬಳಿಕ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆದವು.

ಕುಣಿತ ಭಜನೆ, ಶ್ರೀಕೃಷ್ಣ ವೇಷ ಧರಿಸಿದ ಪುಟಾಣಿಗಳ ವಿವಿಧ ವಿನೋದಾವಳಿಗಳು ಮನರಂಜಿಸಿದವು. ಸಾಕ್ಷಿ ಸ್ವಾಗತಿಸಿದರು. ಭೂಮಿಕಾ ವಂದಿಸಿದರು. ಆಪ್ತ ರೈ ಹಾಗೂ ಅರ್ಪಿತಾ ರೈ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net