ಮಕ್ಕಳ ದಿನಾಚರಣೆ: ಬಾಲಭವನದಲ್ಲಿ ವಿವಿಧ ಸ್ಪರ್ಧೆ ಆಯೋಜನೆ

Painting Competition for Children
Published on

ಮಂಡ್ಯ: ಮಕ್ಕಳ ದಿನಾಚರಣೆ ಅಂಗವಾಗಿ 6 ರಿಂದ 16 ವರ್ಷದೊಳಗಿನವರಿಗಾಗಿ ನ.9ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಬಾಲಭವನದಲ್ಲಿ ಸೃಜನಾತ್ಮಕ ಪ್ರದರ್ಶನ ಕಲೆ, ವಾದ್ಯ ಸಂಗೀತ, ವಿಜ್ಞಾನದಲ್ಲಿ ನೂತನ ಆವಿಷ್ಕಾರ ಮತ್ತು ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿದೆ.

ಜಿಲ್ಲಾಮಟ್ಟದಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರಗಳನ್ನು ವಿತರಿಸುವುದರ ಜತೆಗೆ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಕರೆದೊಯ್ಯಲಾಗುವುದು. ಮಾಹಿತಿಗೆ ಮೊ.ಸಂ 9036801065 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net