ಮೈಸೂರು: ಅಖಿಲ ಕರ್ನಾಟಕ ಒಕ್ಕಲಿಗರ ಮಹಾಸಭಾದಿಂದ ರಾಜ್ಯೋತ್ಸವ ಅಂಗವಾಗಿ ಕನ್ನಡ ರಸಪ್ರಶ್ನೆ ಹಾಗೂ ಕನ್ನಡ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ. ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.
ನಾಲ್ಕು ನಿಮಿಷದ ಭಾಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ತಮಗೆ ಇಚ್ಛೆಯ ವಿಷಯ ಕುರಿತು ಮಾತನಾಡಬಹುದಾಗಿದೆ. ರಸಪ್ರಶ್ನೆ ಸ್ಪರ್ಧೆಯಲ್ಲಿ ಕನ್ನಡ ಹುಟ್ಟು, ಬೆಳವಣಿಗೆ ಪ್ರಸಕ್ತ ಸನ್ನಿವೇಶ, ಕನ್ನಡ ಸಾಹಿತ್ಯ, ಸಂಸ್ಕೃತಿಯನ್ನು ಒಳಗೊಂಡಿರುತ್ತದೆ. ಪ್ರತಿ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಶಾಲೆ ಮುಖ್ಯಸ್ಥರ ಮೂಲಕ ನ.28ರೊಳಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡಲಾಗುವುದು. ಆಸಕ್ತರು ವಿವರಗಳಿಗೆ ಮೊ. 9845156788 ಸಂಪರ್ಕಿಸಬಹುದು ಎಂದು ಮಹಾಸಭಾದ ಸಂಸ್ಥಾಪಕ ಅಧ್ಯಕ್ಷ ಎನ್.ಬೆಟ್ಟೇಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.