

ಕೋಟ: ಪಾಂಡೇಶ್ವರದ ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ವಾಹಿತಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮಕ್ಕಳಿಗೆ ಭಾಷಣ, ಪ್ರಬಂಧ, ದೇಶಭಕ್ತಿ ಗೀತೆ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.
ಪಾಂಡೇಶ್ವರ ಪಂಚಾಯಿತಿ ಉಪಾಧ್ಯಕ್ಷ ವೈ.ಬಿ.ರಾವೇಂದ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಂಚಾಯಿತಿ ಸದಸ್ಯ ಚಂದ್ರಮೋಹನ್ ಪೂಜಾರಿ ಪ್ರಾಸ್ತಾವಿಕವಾಗಿ ವಾತನಾಡಿ, ಮಕ್ಕಳು ಇಂತಹ ಕಾರ್ಯಕ್ರಮಗಳನ್ನು ಸದುಪಯೋಗಿಸಿಕೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಒಳ್ಳೆಯ ಅವಕಾಶ ಎಂದರು. ತೀರ್ಪುಗಾರರಾದ ಜ್ಞಾನೇಶ್ವರಿ ಉಡುಪ ಹಾಗೂ ಶ್ರಾವ್ಯ ಉಪಸ್ಥಿತರಿದ್ದರು. ಗ್ರಂಥಾಲಯ ಮೇಲ್ವಿಚಾರಕಿ ಜ್ಯೋತಿ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.