ವಿವಿಧ ಬೇಡಿಕೆ ಈಡೇರಿಕೆಗೆ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಪಟ್ಟು: ಒಂಬತ್ತನೇ ದಿನಕ್ಕೆ ಕಾಲಿಟ್ಟ ಮುಷ್ಕರ

Kudligi Health Dept Contract Employees Appeal
ಕೂಡ್ಲಿಗಿಯಲ್ಲಿ ತಹಸೀಲ್ದಾರ್ ಎಸ್.ಮಹಾಬಲೇಶ್ವರಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ಶುಕ್ರವಾರ ಮನವಿ ಸಲ್ಲಿಸಿತು.
Published on

ಕೂಡ್ಲಿಗಿ: ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಶುಕ್ರವಾರ ಒಂಬತ್ತನೇ ದಿನ ಪೂರೈಸಿತು.

ನೌಕರ ಗುಡೆಕೋಟೆ ಬಸವರಾಜ್ ಮಾತನಾಡಿ, 15 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರೂ ಪ್ರಮುಖ ಬೇಡಿಕೆಗಳನ್ನು ಈಡೇರಿಸಿಲ್ಲ. ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರೂ ಸರ್ಕಾರ ಸ್ಪಂದಿಸಿಲ್ಲ ಎಂದು ಆರೋಪಿಸಿದರು. ಮನವಿ ಸ್ವೀಕರಿಸಿದ ತಹಸೀಲ್ದಾರ್ ಮಹಾಬಲೇಶ್ವರ, ಕೋವಿಡ್ ಇರುವ ಕಾರಣ ಪ್ರತಿಭಟನೆ ಸೂಕ್ತವಲ್ಲ ಎಂದು ಹೇಳಿದರು. ಸಂಘಟನೆ ಪ್ರಮುಖರಾದ ಗುರುಬಸವರಾಜ್, ಕೊಟ್ರಮ್ಮ, ವಿ.ಬಸವರಾಜ್, ಸತೀಶ, ಡಾ.ಶಿವಕರುಣ, ಡಾ.ರೇಣುಕಾ, ಯಶೋದಾ, ವಿದ್ಯಾವತಿ, ನೇತ್ರಾವತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net