ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

6spt1
Published on


ಸೋಮವಾರಪೇಟೆ: ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 10.40 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಡಾ.ಮಂತರ್‌ಗೌಡ ಬುಧವಾರ ಉದ್ಘಾಟಿಸಿದರು.

ಪಂಚಾಯಿತಿ ವ್ಯಾಪ್ತಿಯ ನಾಲ್ಕು ವಾರ್ಡ್‌ಗಳಲ್ಲಿ ನಿರ್ಮಾಣವಾಗಿರುವ ತಲಾ 80 ಸಾವಿರ ರೂ. ವೆಚ್ಚದ ಹೈಮಾಸ್ಟ್ ಬೀದಿದೀಪ, ಪಂಚಾಯಿತಿ ಪಕ್ಕದಲ್ಲಿ 2 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಕೂಸಿನ ಮನೆ, ಗೌಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮನರೇಗಾದಲ್ಲಿ 5.20ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಹೈಟೆಕ್ ಶೌಚಗೃಹವನ್ನು ಶಾಸಕರು ಉದ್ಘಾಟಿಸಿದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವ ಅವಶ್ಯಕತೆಯಿದೆ. ಸರ್ಕಾರಿ ಪ್ರಾಥಮಿಕ ಶಾಲೆಯ ತಡೆಗೋಡೆಗೆ ಅನುದಾನ ಕಲ್ಪಿಸಲಾಗುವುದು. ನೂತನ ಕೊಠಡಿಗಳು ನಿರ್ಮಾಣವಾಗಿದ್ದು, ಹಳೇ ಕೊಠಡಿಗಳನ್ನು ನೆಲಸಮ ಮಾಡಲು ಕ್ರಮಕೈಗೊಳ್ಳಲಾಗುವುದು. ಶಾಲೆಗೆ ಅತಿಥಿ ಶಿಕ್ಷಕರನ್ನು ನೇಮಿಸಲಾಗುವುದು ಎಂದು ಭರವಸೆ ನೀಡಿದರು. ಗೌಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಜ್ಜಳ್ಳಿ ನವೀನ್, ಉಪಾಧ್ಯಕ್ಷೆ ವಿಶಾಲಾಕ್ಷಿ, ಸದಸ್ಯರಾದ ಮಂಜುನಾಥ್, ವೆಂಕಟೇಶ್, ಗಣೇಶ್, ನಾಗರಾಜು, ಮಲ್ಲಿಕಾ, ರೋಹಿಣಿ, ಸುಮಾ, ಗೌರಿ, ಪಿಡಿಒ ಲಿಖಿತಾ ಇದ್ದರು.

ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರನ್ನು ಸನ್ಮಾನಿಸಲಾಯಿತು. ಬಿಇಒ ಭಾಗ್ಯಮ್ಮ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ಕೆ.ಟಿ.ಚಂದ್ರಕಲಾ ಇದ್ದರು. ವರ್ಗಾವಣೆಯಾಗಿರುವ ಮುಖ್ಯಶಿಕ್ಷಕ ಮಂಜಯ್ಯ, ದೈಹಿಕ ಶಿಕ್ಷಣ ಶಿಕ್ಷಕಿ ಆಶಾ ಅವರನ್ನು ಶಾಸಕರು ಸನ್ಮಾನಿಸಿ ಬೀಳ್ಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net