ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನಾಳೆ

basavaraj BOMMAI
Published on

ಸವಣೂರ: ಮಾಜಿ ಮುಖ್ಯಮಂತ್ರಿ, ಶಾಸಕ ಬಸವರಾಜ ಬೊಮ್ಮಾಯಿ ಆ.25ರಂದು ಪಟ್ಟಣ, ತಾಲೂಕಿನ ತೊಂಡೂರ ಹಾಗೂ ಚಿಕ್ಕಬೂದಿಹಾಳ ಗ್ರಾಮಗಳಲ್ಲಿ ಜರಗುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಪಟ್ಟಣದ ವಿದ್ಯಾ ಭಾರತಿ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜ್​ನಲ್ಲಿ ಮಧ್ಯಾಹ್ನ 12 ಗಂಟೆಗೆ ಏರ್ಪಡಿಸಿರುವ ವಿದ್ಯಾರ್ಥಿಗಳ ಸ್ವಾಗತ, ಕಾಲೇಜ್ ಸಂಸತ್ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ತಾಲೂಕಿನ ಚಿಕ್ಕಬೂದಿಹಾಳ ಗ್ರಾಮದಲ್ಲಿ ಮಧ್ಯಾಹ್ನ 1 ಗಂಟೆಗೆ ಏರ್ಪಡಿಸಿರುವ ಶ್ರೀ ಹೊನ್ನಮ್ಮದೇವಿ ನೂತನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಕಳಸಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ತಾಲೂಕಿನ ತೊಂಡೂರ ಗ್ರಾಮದಲ್ಲಿ ಮಧ್ಯಾಹ್ನ 2.30ಕ್ಕೆ ಏರ್ಪಡಿಸಿರುವ ಹಾಲು ಉತ್ಪಾದಕರ ಸಹಕಾರಿ ಸಂಘದ ಶಿತಲೀಕರಣ ಘಟಕ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net