ವಾರ್ಷಿಕೋತ್ಸವ ಪ್ರಯುಕ್ತ ವಿವಿಧ ಪೂಜಾ ಕೈಂಕರ್ಯ

koote mariyamma
Published on

ಮಡಿಕೇರಿ: ನಗರದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ, ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ದೈವ ಕೋಲ ಪ್ರಯುಕ್ತ ವಿವಿಧ ಪೂಜಾ ಕೈಂಕರ್ಯ ನಡೆಯಿತು.


ಪಯ್ಯನ್ನೂರ್ ಆಚಾರ್ಯ ಈಶ್ವರನ್ ನಂಬೂದರಿ ಅವರ ನೇತೃತ್ವದಲ್ಲಿ ಭಾನುವಾರದಿಂದ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಭಾನುವಾರ ಸಂಜೆ ೬ ಗಂಟೆಗೆ ಆಚಾರ್ಯ ವರಣಂ, ಪುಣ್ಯಹ ಶುದ್ಧಿ, ಸುದರ್ಶನ ಹೋಮ, ದೇವಿ ಪೂಜೆ, ಲಲಿತಾ ಸಹಸ್ರನಾಮಾರ್ಚನೆ ಹಾಗೂ ಪ್ರಸಾದ ವಿತರಣೆ ನಡೆಯಿತು.


ಸೋಮವಾರ ಬೆಳಿಗ್ಗೆ ೬ ಗಂಟೆಗೆ ಮಹಾಗಣಪತಿ ಹೋಮ, ನವಕ ಪಂಚಗವ್ಯ ಕಳಸ ಪೂಜೆ, ನವಕ ಪಂಚಗವ್ಯ ಕಳಸಾಭಿಷೇಕ, ಸರ್ವಾಲಂಕಾರ ಮಹಾಪೂಜೆ, ಶ್ರೀ ಪಾಷಾಣಮೂರ್ತಿ ದೈವದ ಕಳಸ ಪೂಜೆ, ಅಲಂಕಾರ ಪೂಜೆ ಹಾಗೂ ಮಂಗಳಾರತಿ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net