

ಶಿರಸಿ: ಶರನ್ನವರಾತ್ರಿ ಅಂಗವಾಗಿ ನಗರದ ಮಾರಿಕಾಂಬಾ ದೇವಾಲಯದಲ್ಲಿ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ಮತ್ತು ಸ್ಪರ್ಧಾ ಕಾರ್ಯಕ್ರಮಗಳನ್ನು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸೆ. 14ರಿಂದಲೇ ಸ್ಪರ್ಧಾ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ ಎಂದು ದೇವಾಲಯದ ಉಪಾಧ್ಯಕ್ಷ ಸುದೇಶ ಜೋಗಳೇಕರ್ ಹೇಳಿದರು.
ನಗರದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಸೆ.14ರಂದು ಬೆಳಗ್ಗೆ ವಿದ್ಯಾರ್ಥಿಗಳಿಗಾಗಿ ಖೋಖೋ, ಕಬಡ್ಡಿ, ವಾಲಿಬಾಲ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಪುರುಷರು ಮತ್ತು ಮಹಿಳೆಯರಿಗಾಗಿ ಹಗ್ಗ ಜಗ್ಗಾಟ ಸ್ಪರ್ಧೆ, 40ರಿಂದ 60 ವರ್ಷದವರಿಗಾಗಿ ಓಟ, ಗುಂಡು ಎಸೆತ, ವೇಗದ ನಡುಗೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.
ದೇವಾಲಯದ ವತಿಯಿಂದ ಅ. 11ರವರೆಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಹಾಗೂ ವಿವಿಧ ಸ್ಪರ್ಧೆಗಳು ನಡೆಯಲಿವೆ. ಅ.3ರಿಂದ 12ರವರೆಗೆ ಪ್ರತಿ ದಿನ ಸಂಜೆ ಭಜನೆ, ಕೀರ್ತನೆ ನಡೆಯಲಿವೆ. ಅ.12ರಂದು ವಿಜಯದಶಮಿ ಅಂಗವಾಗಿ ಪಡಲಿಗೆ ಉತ್ಸವ, ಸೀಮೋಲ್ಲಂಘನ, ಪಲ್ಲಕ್ಕಿ ಉತ್ಸವ ನಡೆಯಲಿದೆ. ಸೆ.29ರಂದು ವಿದ್ಯಾರ್ಥಿಗಳಿಗಾಗಿ ಚದುರಂಗ ಸ್ಪರ್ಧೆ ನಡೆಯಲಿದೆ. ಅ.3ರಂದು ವಿದ್ಯಾರ್ಥಿಗಳಿಗಾಗಿ ರಂಗವಲ್ಲೀ ಸ್ಪರ್ಧೆ, ಭಕ್ತಿಗೀತೆ ಸ್ಪರ್ಧೆ, ಅ.4ರಂದು ಯುವಕರಿಗಾಗಿ ಹಳ್ಳಿ ಹಾಡು ಸ್ಪರ್ಧೆ, ಭಾವಗೀತೆ ಸ್ಪರ್ಧೆ, ಅ.5ರಂದು ಧ್ಯಾನಮಾಲಿಕೆ ಸ್ಪರ್ಧೆ, ಜಾನಪದ ಗುಂಪು ನೃತ್ಯ ಸ್ಪರ್ಧೆ, ಅ.6ರಂದು ಆರತಿ ತಾಟಿನ ಸ್ಪರ್ಧೆ, ಶಾಸ್ತಿçÃಯ ನೃತ್ಯ, ಅ.7ರಂದು ಕರಕುಶಲ ವಸ್ತುಗಳ ಪ್ರದರ್ಶನ ಸ್ಪರ್ಧೆ, ಅಂಗನವಾಡಿ ವಿದ್ಯಾರ್ಥಿಗಳಿಗಾಗಿ ನೃತ್ಯ ಸ್ಪರ್ಧೆ, ಅ.8ರಂದು ಸಮೂಹ ದೇಶಭಕ್ತಿ ಗೀತೆ ಸ್ಪರ್ಧೆ, ಸಾಮಾನ್ಯ ಜ್ಞಾನ ಸ್ಪರ್ಧೆ, ಅ.9ರಂದು ಭಗವದ್ಗೀತೆ ಶ್ಲೋಕ ಕಂಠಪಾಠ ಸ್ಪರ್ಧೆ, ಜಾನಪದ ಹಾಡುಗಳ ಸ್ಪರ್ಧೆ, ಅ.10 ಮತ್ತು 11ರಂದು ಚಿತ್ರಕಲೆ ಸ್ಪರ್ಧೆ, ಚಿಕ್ಕ ಮಕ್ಕಳ ಫ್ಯಾನ್ಸಿ ಡ್ರೆಸ್ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.
ಧರ್ಮದರ್ಶಿ ಸುಧೀರ ಹಂದ್ರಾಳ ಮಾತನಾಡಿ, ನವರಾತ್ರಿ ಕ್ರೀಡಾ ಕೂಟವನ್ನು ಈ ವರ್ಷ ಮುಂಚಿತವಾಗಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಅರ್ಧ ವಾರ್ಷಿಕ ಪರೀಕ್ಷೆಗಳು ಆರಂಭವಾಗುವ ಹಿನ್ನೆಲೆಯಲ್ಲಿ ಅವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದರು.
ಧರ್ಮದರ್ಶಿಗಳಾದ ವತ್ಸಲಾ ಹೆಗಡೆ, ಚಂದ್ರಕಾAತ ಭಂಡಾರಿ, ಬಾಬುದಾರರಾದ ಬಸವರಾಜ ಚಕ್ರಸಾಲಿ, ಜಗದೀಶ ಕುರುಬರ್ ಇತರರಿದ್ದರು.