ವಿವಿಧ ಯೋಜನಾ ಕಾರ್ಯಕ್ರಮ ಪ್ರಗತಿ ಸಾಧಿಸಿ: ಡಿಸಿ

dc sabhe
Published on

ಮಡಿಕೇರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನಾ ಕಾರ್ಯಕ್ರಮ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾರವರು ಅಧಿಕಾರಿಗಳಿಗೆ ಸೂಚಿಸಿದರು.


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಸಂಬಂಧ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾರ್ಯಕ್ರಮ ಅನುಷ್ಠಾನದಲ್ಲಿ ಶೇ.೧೦೦ ರಷ್ಟು ಪ್ರಗತಿ ಸಾಧಿಸಬೇಕೆಂದು ನಿರ್ದೇಶನ ನೀಡಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಗತಿ ಸಾಧಿಸಬೇಕು. ಪ್ರಗತಿ ಸಾಧಿಸದಿದ್ದಲ್ಲಿ ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.


ಖಜಾನೆಗೆ ಬಿಲ್ಲು ಸಲ್ಲಿಸಲು ಕೊನೆಯ ದಿನ ಹತ್ತಿರ ಬರುತ್ತಿದೆ. ಆದ್ದರಿಂದ ಎಲ್ಲಾ ಇಲಾಖೆ ಅಧಿಕಾರಿಗಳು ಎಚ್ಚರವಹಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.


ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಸಂಗೋಪನೆ, ವಿದ್ಯುತ್, ಸಹಕಾರ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರವಾಸೋದ್ಯಮ, ವೈದ್ಯಕೀಯ ಶಿಕ್ಷಣ, ಸಣ್ಣ ನೀರಾವರಿ, ವಸತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕೈಮಗ್ಗ ಜವಳಿ, ಕಾರ್ಮಿಕ, ಲೋಕೋಪಯೋಗಿ, ಅರಣ್ಯ, ನಗರಾಭಿವೃದ್ಧಿ, ಸಾರಿಗೆ, ಕೌಶಲ್ಯಾಭಿವೃದ್ಧಿ, ಪಂಚಾಯತ್ ರಾಜ್, ಆಯುಷ್, ಸಣ್ಣ ನೀರಾವರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉನ್ನತ ಶಿಕ್ಷಣ, ಕಂದಾಯ ಹೀಗೆ ವಿವಿಧ ಇಲಾಖೆಗಳಿಂದ ಮಾಹಿತಿ ಪಡೆದರು.
ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net