

ಮಡಿಕೇರಿ: ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.೧೮ ರಂದು ವಿವಿಧ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ಧರ್ಮದರ್ಶಿ ಗೋವಿಂದ ಸ್ವಾಮಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಿಗ್ಗೆ ೯ ಗಂಟೆಯಿಂದ ಕಾಶಿಲಿಂಗಕ್ಕೆ ಕ್ಷೀರಾಭಿಷೇಕ ಹಾಗೂ ಪಂಚಾಮೃತ ಅಭಿಷೇಕ ನಡೆಯಲಿದೆ. ಮಧ್ಯಾಹ್ನ ೧೨ ಗಂಟೆಗೆ ಮಹಾಮಂಗಳಾರತಿ ನಂತರ ಭಕ್ತಾಧಿಗಳಿಂದ ಪಂಚಲಿಂಗಕ್ಕೆ ಪವಿತ್ರ ಗಂಗಾಜಲದಿಂದ ಅಭಿಷೇಕ ಮತ್ತು ಶಿವನ ಮೂರ್ತಿಗೆ ಪುಷ್ಪಾರ್ಚನೆಯಾಗಲಿದೆ. ಸಂಜೆ ೭ ಗಂಟೆಗೆ ಭಕ್ತಾಧಿಗಳಿಗೆ ದೀಪಲಂಕಾರ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ರಾತ್ರಿ ೮ ಗಂಟೆಗೆ ತಾಯಿಯ ದರ್ಶನ ಇರುತ್ತದೆ ಎಂದು ತಿಳಿಸಿದ್ದಾರೆ.
ಮಧ್ಯಾಹ್ನ ಹಾಗೂ ರಾತ್ರಿ ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಂಜೆ ಭಕ್ತಿ ಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
ಗಂಗಾಜಲ ಅಭಿಷೇಕ: ಪಂಚಲಿಂಗಕ್ಕೆ ಪವಿತ್ರ ಗಂಗಾಜಲದಿಂದ ಅಭಿಷೇಕ ಮತ್ತು ಶಿವನಮೂರ್ತಿಗೆ ಪುಷ್ಪಾರ್ಚನೆಯನ್ನು ಖುದ್ದು ತಾವೇ ಮಾಡಲಿಚ್ಛಿಸುವವರು ದೇವಾಲಯದ ಕಚೇರಿಯನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ೦೮೨೭೨ ೨೯೫೬೬೮, ೯೪೮೦೭೩೦೫೨೩, ೯೪೮೧೯೫೯೦೮೦ ಗೆ ಕರೆ ಮಾಡಬಹುದೆಂದು ಹೇಳಿದ್ದಾರೆ.