ನವದುರ್ಗಾ ಮಂಟಪಕ್ಕೆ ಶಂಕುಸ್ಥಾಪನೆ

mantapa
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ನವದುರ್ಗಾ ಮಂಟಪದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು
Published on

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆಗೊಳ್ಳುತ್ತಿರುವ ಕಾಪು ಮಾರಿಯಮ್ಮನ ದೇಗುಲದ ಅಭಿವೃದ್ಧಿ ಕಾಮಗಾರಿಗೆ ಪೂರಕವೆಂಬಂತೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ನವದುರ್ಗಾ ಮಂಟಪದ ಕಟ್ಟಡ ನಿರ್ಮಾಣಕ್ಕೆ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಲಾಯಿತು.

ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ ಜತೆಯಾಗಿ ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿಧಾನದಲ್ಲಿ ಪ್ರಾರ್ಥಿಸಿ ಶಿಲೆಗಳನ್ನು ಕಾಪು ದೇವಳಕ್ಕೆ ತರುವುದರ ಜತೆಗೆ ಪ್ರಾರ್ಥನೆ ನೆರವೇರಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ದೇವಳದ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ನವದುರ್ಗಾ ಲೇಖನ ಯಜ್ಞ ಸಮಿತಿ ಪ್ರಧಾನ ಕಾರ್ಯದರ್ಶಿ ಯೋಗೀಶ್ ವಿ. ಶೆಟ್ಟಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮನೋಹರ್ ಎಸ್. ಶೆಟ್ಟಿ, ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕಿ ಬೀನಾ ವಿ. ಶೆಟ್ಟಿ ಜತೆಯಾಗಿ ಶಂಕುಸ್ಥಾಪನೆ ನೆರವೇರಿಸಿದರು. ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಅನಿಲ್ ಬಳ್ಳಾಲ್, ಉಪಾಧ್ಯಕ್ಷ ಮಾಧವ ಆರ್, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸುಹಾಸ್ ಹೆಗ್ಡೆ, ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಾಧ್ಯಕ್ಷ ಕೃಷ್ಣಪ್ರಸಾದ್, ಉಪಾಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ನಾರಾಯಣ ಶೆಟ್ಟಿ, ಉಡುಪಿ ನಗರಸಭಾ ಸಮಿತಿ ಪ್ರಧಾನ ಸಂಚಾಲಕ ದಿವಾಕರ ಶೆಟ್ಟಿ, ಆರ್ಥಿಕ ಸಮಿತಿ ಮುಖ್ಯ ಸಂಚಾಲಕ ರತ್ನಾಕರ ಹೆಗ್ಡೆ, ರಮೇಶ್ ಶೆಟ್ಟಿ, ಕೋಶಾಧಿಕಾರಿ ಕೆ ವಿಶ್ವನಾಥ್, ಸಂಘಟನಾ ಕಾರ್ಯದರ್ಶಿ ಸಂದೀಪ್ ಕುಮಾರ್, ಕಾಪು ಗ್ರಾಮ ಸಮಿತಿ ಪ್ರಧಾನ ಸಂಚಾಲಕ ಅರುಣ್ ಶೆಟ್ಟಿ, ಪುರಸಭಾ ವಾರ್ಡ್ ಸಮಿತಿ ಪ್ರಧಾನ ಸಂಚಾಲಕ ಶ್ರೀಕರ ಶೆಟ್ಟಿ, ಗೌರವ ಸಲಹೆಗಾರ ವಿಕ್ರಂ, ನಿರ್ಮಲ್ ಕುಮಾರ್ ಹೆಗ್ಡೆ, ವಾರ್ಡ್ ಸಮಿತಿಯ ಅನಿಲ್ ಕುಮಾರ್, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ಜಗದೀಶ್ ಬಂಗೇರ, ಚಂದ್ರಶೇಖರ ಅಮೀನ್, ರವೀಂದ್ರ ಎಂ, ಬಾಬು ಮಲ್ಲಾರ್, ರೇಣುಕಾ ದೇವಾಡಿಗ, ಶೈಲಜಾ ಪುರುಷೋತ್ತಮ್, ಪ್ರಮುಖರಾದ ಗೀತಾಂಜಲಿ ಎಂ ಸುವರ್ಣ, ಶಿಲ್ಪಾ ಜಿ.ಸುವರ್ಣ, ಸಾವಿತ್ರಿ ಗಣೇಶ್, ಮಧುಕರ್ ಎಸ್, ಸುನಿಲ್ ಎಸ್. ಪೂಜಾರಿ, ಜಯರಾಮ್ ಆಚಾರ್ಯ, ರಘುರಾಮ್ ಶೆಟ್ಟಿ, ಗೋವರ್ಧನ್ ಉಪಸ್ಥಿತರಿದ್ದರು.

ಮುಂಗಡ ಪಾವತಿಸಿ ಚಾಲನೆ

ಕ್ಷೇತ್ರದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕೊರಂಗ್ರಪಾಡಿ ದೊಡ್ಡಮನೆ ನೇತ್ರಾವತಿ ಶೆಡ್ತಿ ಸ್ಮರಣಾರ್ಥ ಕಾಪು ದೇವಿಪ್ರಸಾದ್ ಕನ್‌ಸ್ಟ್ರಕ್ಷನ್ಸ್ ಆಡಳಿತ ನಿರ್ದೇಶಕಿ ಬೀನಾ ವಾಸುದೇವ ಶೆಟ್ಟಿ ಅವರು ಗುತ್ತಿಗೆದಾರ ಪರಮೇಶ್ ಆಚಾರ್ಯರಿಗೆ ಮುಂಗಡ ಪಾವತಿಸಿ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದರು.

ಯಾವ್ಯಾವ ಕಾಮಗಾರಿಗೆ ಚಾಲನೆ?

ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಗಳ ಕಚೇರಿ, ಒಂಬತ್ತು ಸೇವಾ ಕೌಂಟರ್, ಮೀಟಿಂಗ್ ಹಾಲ್ ಒಳಗೊಂಡಿರುವ ಸುಸಜ್ಜಿತ ಕಟ್ಟಡದ ಕಾಮಗಾರಿಗೆ ಕ್ಷೇತ್ರದ ಪ್ರಧಾನ ತಂತ್ರಿ ಕೆ. ಪಿ ಕುಮಾರಗುರು ತಂತ್ರಿ ಮಾರ್ಗದರ್ಶನದಲ್ಲಿ, ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ ನೇತೃತ್ವದಲ್ಲಿ ಶಂಕುಸ್ಥಾಪನೆ ಧಾರ್ಮಿಕ ವಿಧಿಗಳು ನೆರವೇರಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net