ಬೈಂದೂರಿನಲ್ಲಿ ವರ್ಷಾವಧಿ ಆಭಾರಿ ಸೇವೆ

abhari
Published on

ಬೈಂದೂರು: ಎರಡು ವರ್ಷಗಳ ಹಿಂದೆ ಉಂಟಾದ ಮತ್ಸೃ ಕ್ಷಾಮದಿಂದ ಮೀನುಗಾರರು ತುಂಬಾ ಸಂಕಷ್ಟಕ್ಕೆ ಸಿಲುಕಿದ್ದು, ಗ್ರಾಮದೇವತೆ ಶ್ರೀ ದುರ್ಗಾಪರಮೆಶ್ವರಿ ಅಮ್ಮನವರಿಗೆ ಅಭಾರಿ ಸೇವೆಯ ಹರಕೆ ಸಲ್ಲಿಸಿದ ಬಳಿಕ ಮೀನುಗಾರರ ಪರಿಸ್ಥಿತಿ ಸುಧಾರಿಸಿದೆ. ಈ ಹಿನ್ನೆಲೆಯಲ್ಲಿ ವರ್ಷವೂ ರಾಣಿಬಲೆ ಮೀನುಗಾರರ ಒಕ್ಕೂಟ ವತಿಯಿಂದ ಅಭಾರಿ ಸೇವೆ ಸಲ್ಲಿಸಲಾಗುತ್ತಿದೆ ಎಂದು ಒಕ್ಕೂಟ ಅಧ್ಯಕ್ಷ ವೆಂಕಟರಮಣ ಖಾರ್ವಿ ಹೇಳಿದರು.

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶುಕ್ರವಾರ ಚಂಡಿಕಾಹೋಮಕ್ಕೆ ಪೂರ್ಣಾಹುತಿ ನೀಡಿದ ನಂತರ ಮಾಧ್ಯಮದವರ ಜತೆ ಮಾತನಾಡಿದರು.

ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿ, ಕೆ.ಗೋಪಾಲ ಪೂಜಾರಿ, ಖಂರೈಸೇಸ ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ ಶೆಟ್ಟಿ ಮತ್ತು ಸದಸ್ಯರು, ಒಕ್ಕೂಟ ಪದಾಧಿಕಾರಿಗಳು, ಜಿಪಂ ಮಾಜಿ ಸದಸ್ಯರಾದ ಮದನಕುಮಾರ್, ಶಂಕರ ಪೂಜಾರಿ ಇದ್ದರು. ರಾತ್ರಿ ಮಹಾರಂಗಫೂಜೆ ಮತ್ತು ಅಮ್ಮನವರ ಬೆಳ್ಳಿರಥೋತ್ಸವ ಜರುಗಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net