ಚೆಸ್‌ನಲ್ಲಿ ವರ್ಷಿಣಿ ರಾಜ್ಯಮಟ್ಟಕ್ಕೆ ಆಯ್ಕೆ

HUN-OCT-25-1(VARSHINI)
Published on

ಹುಣಸೂರು : ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮೈಸೂರಿನ ವಿಜಯವಿಠಲ ವಿದ್ಯಾ ಶಾಲಾ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಹುಣಸೂರು ತಾಲೂಕಿನ ಸರ್ಕಾರಿ ಪ್ರೌಢಶಾಲೆ ಹುಂಡಿಮಾಳ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ವರ್ಷಿಣಿ ವಿಜೇತರಾಗುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಾಲೆಯ ದೈಹಿಕ ಶಿಕ್ಷಣ ಸಿಕ್ಷಕ ಬಿ.ಮಂಜುನಾಥ್ ವಿದ್ಯಾರ್ಥಿನಿಗೆ ತರಬೇತಿ ನೀಡಿದ್ದು, ವಿದ್ಯಾರ್ಥಿನಿಯ ಸಾಧನೆಯನ್ನು ಪ್ರಾಂಶುಪಾಲ ರವಿ ಮತ್ತು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ರಮೇಶ್ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net