ಕರಾವಳಿ, ಮಲೆನಾಡಲ್ಲಿ ವರುಣಾರ್ಭಟ: ಜೂ.26ರಿಂದ ಉತ್ತರ ಕರ್ನಾಟಕದಲ್ಲಿ ಬಿರುಸು

Rainy weather
Rainy weather
Published on

ಬೆಂಗಳೂರು: ರಾಜ್ಯದ ಹಲವೆಡೆ ಕ್ಷೀಣವಾಗಿದ್ದ ಮಳೆ, ಕರಾವಳಿ ವ್ಯಾಪ್ತಿಯ ಪ್ರದೇಶಗಳಲ್ಲಿ ಜೂ.23ರಿಂದ ಹಾಗೂ ಮಲೆನಾಡು,ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಜೂ.26ರಿಂದ ಬಿರುಸುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಉಡುಪಿಯ ಕಾರ್ಕಳ, ಸಿದ್ದಾಪುರ, ಉತ್ತರ ಕನ್ನಡದ ಕದ್ರಾ, ಕ್ಯಾಸಲ್​ ರಾಕ್​,ಯಲ್ಲಾಪುರ, ಗೇರುಸೊಪ್ಪ, ದಕ್ಷಿಣ ಕನ್ನಡದ ಮೂಡುಬಿದರೆ, ಮಾಣಿ, ಉಪ್ಪಿನಂಗಡಿ, ಕೊಡಗಿನ ಭಾಗಮಂಡಲ, ಚಿಕ್ಕಮಗಳೂರಿನ ಕೊಟ್ಟಿಗೆಹಾರ ಮತ್ತು ಶೃಂಗೇರಿಯಲ್ಲಿ ಭಾನುವಾರ ಭರ್ಜರಿ ಮಳೆ ಸುರಿದಿತ್ತು. ಕರಾವಳಿ ಭಾಗದ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾದರೆ, ದಕ್ಷಿಣ ಕರ್ನಾಟಕ ವ್ಯಾಪ್ತಿಯ ಒಂದೆರಡು ಸ್ಥಳಗಳಲ್ಲಿ ಸಾಧಾರಣವಾಗಿತ್ತು.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜೂ.23ರಿಂದ ಜೂ.29ರವರೆಗೆ ಬಿರುಸಾಗಿ ವರ್ಷಧಾರೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.

ಶಿವಮೊಗ್ಗ, ಕೊಡಗು,ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಗದಗದಲ್ಲಿ ಜೂ.26ರಿಂದ ಮುಂದಿನ 3 ದಿನ ಯೆಲ್ಲೋ ಅಲರ್ಟ್​​ ಇರಲಿದೆ. ಈ ಸಂದರ್ಭದಲ್ಲಿ ಕೆಲವು ಪ್ರದೇಶಗಳಲ್ಲಿ ಪ್ರತಿ ಗಂಟೆಗೆ 40-50 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಚಿತ್ರದುರ್ಗ, ವಿಜಯನಗರ, ಬಳ್ಳಾರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ,ಯಾದಗಿರಿಯಲ್ಲಿ ಮುಂದಿನ 4 ದಿನ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net