ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ವರುಣಾರ್ಭಟ: 21ರಂದು 3 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​​​​

Delhi Rain
Published on

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಬೆಂಗಳೂರು ನಗರ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಭರ್ಜರಿ ಮಳೆ ಸುರಿದಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮೇ 21ರಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್​ ಅರ್ಲಟ್​ ಕೊಟ್ಟಿದೆ. ಈ ಜಿಲ್ಲೆಗಳಲ್ಲಿ ಮೇ 19ರಿಂದ ಮುಂದಿನ 2 ದಿನ ಯೆಲ್ಲೋ ಅಲರ್ಟ್​​​​​ ನೀಡಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗದಲ್ಲಿ ಮೇ 20 ಮತ್ತು ಮೇ 21ರಂದು ಬಿರುಸಾಗಿ ವರ್ಷಧಾರೆಯಾಗುವ ಹಿನ್ನೆಲೆಯಲ್ಲಿ ಆರೆಂಜ್​ ಅಲರ್ಟ್​​​ ಕೊಡಲಾಗಿದೆ.

ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಿತ್ರದುರ್ಗ, ಕೊಪ್ಪಳ, ಮುಂದಿನ 2 ದಿನ ಯೆಲ್ಲೋ ಅಲರ್ಟ್​​​​​​​ ಇರಲಿದೆ. ಉಳಿದೆಡೆ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ಈ ವೇಳೆ ಕೆಲ ಜಿಲ್ಲೆಗಳಲ್ಲಿ ಗಾಳಿ ವೇಗವೂ ಅಧಿಕವಾಗಿರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ತಾಪಮಾನ ಇಳಿಕೆ: ಪೂರ್ವ ಮುಂಗಾರಿನ ಮಳೆ ಆರ್ಭಟದಿಂದಾಗಿ ರಾಜ್ಯದ ಬಹುತೇಕ ಜಿಲ್ಲೆಗಳ ತಾಪಮಾನ ಕುಸಿತವಾಗಿದೆ. ಉತ್ತರ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ 40 ಡಿ.ಗ್ರಿ.ಅಸುಪಾಸಿನಲ್ಲಿ ದಾಖಲಾಗುತ್ತಿದ್ದ ಉಷ್ಣಾಂಶವು 33 ಡಿ.ಸೆ.ನಿಂದ 37 ಡಿ.ಸೆ.ವರೆಗೆ ವರದಿಯಾಗುತ್ತಿದೆ. ದಕ್ಷಿಣ ಕರ್ನಾಟಕ, ಕರಾವಳಿ ವ್ತಾಪ್ತಿಯ ಪ್ರದೇಶಗಳಲ್ಲಿ 35-36ರ ಅಸುಪಾಸಿನಲ್ಲಿ ಕಂಡುಬರುತ್ತಿದ್ದ ತಾಪಮಾನವು 31-33 ಡಿ.ಸೆ.ದಾಖಲಾಗುತ್ತಿದೆ. ಒಟ್ಟಿನಲ್ಲಿ ಮಳೆ ಪರಿಣಾಮ ತಂಪಾದ ವಾತಾವರಣ ಅನುಭವವಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net