ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿಧಿವಶ

vasantha bangera
Published on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ನಾಯಕ, ಬೆಳ್ತಂಗಡಿಯಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಕೆ.ವಸಂತ ಬಂಗೇರ (79) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಕೇದೆ ಸುಬ್ಬ ಪೂಜಾರಿ-ದೇವಕಿ ದಂಪತಿಯ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದರು. ಇತ್ತೀಚೆಗೆ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರು ಕೊನೆಯುಸಿರೆಳೆದಿದ್ದಾರೆ. ಮೇ 9ರಂದು ಬೆಳಗ್ಗೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ಸಾಧ್ಯತೆ ಇದೆ. ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net